ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಲವ್, ಸೆಕ್ಸ್ ಔರ್ ಸುಸೈಡ್ - ಕೆರೆಗೆ ಹಾರಿದ ಯುವಕ !

ಹುಬ್ಬಳ್ಳಿ: ಪ್ರೇಯಸಿಯೊಂದಿಗೆ ಕ್ಷುಲ್ಲಕ ವಿಚಾರಕ್ಕೆ ಜಗಳವಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಉಣಕಲ್ ಕೆರೆಯಲ್ಲಿ ನಡೆದಿದೆ. ನಗರದ ನವನಗರದ‌ ನಿವಾಸಿ ಸಂದೇಶ ಯಾರ್ಕಡ್ (30) ಎಂಬ ಯುವಕನೇ ಮೃತ ದುರ್ದೈವಿಯಾಗಿದ್ದಾನೆ.‌

ಸಂದೇಶ, ಹುಬ್ಬಳ್ಳಿಯ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ. ತನ್ನ ಪ್ರೇಯಸಿಯ ಜೊತೆಗೆ ಕ್ಷುಲ್ಲಕ ಕಾರಣಕ್ಕಾಗಿ ಜಗಳ ಮಾಡಿಕೊಂಡು ಏಕಾಏಕಿ ಉಣಕಲ್ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇನ್ನು ಆತ್ಮಹತ್ಯೆಗೂ ಮುನ್ನ ತನ್ನ ಪ್ರೇಯಸಿಯ ಜೊತೆಗಿನ‌ ಖಾಸಗಿ ವೀಡಿಯೊ ಹಾಗೂ ಸಂಭಾಷಣೆಗಳ ಫೋಟೋಗಳನ್ನು ತನ್ನ ಸ್ನೇಹಿತರಿಗೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವುದು ಹಲವು ಅನುಮಾನ ಮೂಡಿಸಿದೆ.

ಈ‌ ಕುರಿತಂತೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ಯುವಕನ‌ ಸಾವಿನ ವಿಚಾರವಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Edited By : Shivu K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

14/01/2025 05:34 pm

Cinque Terre

186.55 K

Cinque Terre

7

ಸಂಬಂಧಿತ ಸುದ್ದಿ