ಬೈಲಹೊಂಗಲ: ಸಮೀಪದ ಸುಕ್ಷೇತ್ರ ಸೊಗಲದಲ್ಲಿ ಮಕರ ಸಂಕ್ರಾಂತಿ ನಿಮಿತ್ತ ನಡೆದ ಶ್ರೀ ಸೋಮೇಶ್ವರ ತೆಪ್ಪದ ರಥೋತ್ಸವ ಮಂಗಳವಾರ ಸಂಜೆ ಸಡಗರ ಸಂಭ್ರಮದಿಂದ ಜರುಗಿತು.
ಬಾಳಿಯ ದಿಂಡಿನ ತೆಪ್ಪದ ರಥೋತ್ಸವನ್ನು ಕಬ್ಬು, ತೆಂಗು, ವಿವಿಧ ಹೂವುಗಳಿಂದ ಅಲಂಕರಿಸಲಾಗಿತ್ತು. ವಾದ್ಯಮೇಳಗಳಿಂದ ಸೋಮೇಶ್ವರನ ದೇವಸ್ಥಾನದಲ್ಲಿದ್ದ ಬೆಳ್ಳಿಯ ಮೂರ್ತಿಯನ್ನು ಪಲ್ಲಕಿಯಲ್ಲಿ ತಂದು ತೆಪ್ಪದ ರಥೋತ್ಸವದಲ್ಲಿ ಪ್ರತಿಷ್ಠಾಪಿಸಿ ಹೊಸೂರ ಗುರುಮಡಿವಾಳೇಶ್ವರಮಠದ ಗಂಗಾಧರ ಸ್ವಾಮೀಜಿ, ಮೂರುಸಾವಿರಮಠದ ಪ್ರಭು ನೀಲಕಂಠ ಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿದರು.
ಹಿರಿಯ ಅರ್ಚಕರಾದ ನಿಂಗಯ್ಯ ಪೂಜೇರಿ, ಗುರುಸ್ವಾಮಿ ಹೊಸಪೇಟಿಮಠ ಪ್ರಾರ್ಥಿಸಿದರು.
ಶಾಸಕ ಮಹಾಂತೇಶ ಕೌಜಲಗಿ, ಟ್ರಸ್ಟ್ ಅಧ್ಯಕ್ಷ, ಆಡಳಿತ ಮಂಡಳಿ ಸರ್ವ ಸದಸ್ಯರು, ಸುತ್ತಲಿನ ಗ್ರಾಮಗಳ ಪ್ರಮುಖರ ಹಾಗೂ ಸಾವಿರಾರು ಭಕ್ತರ ಜಯಘೋಷಗಳ ಮಧ್ಯ ವಿಜೃಂಭಣೆಯಿಂದ ತಪ್ಪೋತ್ಸವದಲ್ಲಿ ಸಹಸ್ರಾರು ಜನ ಪಾಲ್ಗೊಂಡು ಉತ್ತತ್ತಿ, ಬಾಳೆ ಹಣ್ಣು, ಹೂವು ರಥಕ್ಕೆ ತೂರಿ ಭಕ್ತಿ-ಭಾವ ಮೆರದರು. ಕೆಳಗಿನ ಹೊಂಡದಲ್ಲಿ ಹಾಗೂ ಜಲಾಧಾರೆಗಳಿಗೆ ಮಹಿಳೆಯರು ಪೂಜೆ ಸಲ್ಲಿಸಿ ನೈವದ್ಯ ಅರ್ಪಿಸಿದರು.
Kshetra Samachara
14/01/2025 06:06 pm