ಬೆಳಗಾವಿ: ಕಬ್ಬು ತುಂಬಿದ ಟ್ರ್ಯಾಕ್ಟರ್ ಹಿಂಬದಿಗೆ ಕಾರು ಡಿಕ್ಕಿ ಹೊಡೆದಿರುವ ಪರಿಣಾಮ ಮೂವರ ಸ್ಥಿತಿ ಗಂಭೀರವಾಗಿದೆ.
ಬೆಳಗಾವಿಯ ವೈಭವ ನಗರ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬೆಳಗಾವಿ ತಾಲೂಕಿನ ಹೊನಗಾ ಗ್ರಾಮದ ನಾಲ್ವರ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಆಂಬ್ಯುಲೆನ್ಸ್ ಮೂಲಕ ಖಾಸಗಿ ಆಸ್ಪತ್ರೆಗೆ ಗಾಯಾಳುಗಳನ್ನು ರವಾನಿಸಲಾಗಿದೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
PublicNext
14/01/2025 08:22 pm