ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಊಟಕ್ಕೆ ಗಂಜಿ ಕೊಡಲಾಗುತ್ತಿದೆ- ಡಾ.ರವಿ ಪಾಟೀಲ್

ಬೆಳಗಾವಿ: ಲಕ್ಷ್ಮೀ ಹೆಬ್ಬಾಳ್ಕರ್ ಚಿಕಿತ್ಸೆಗೆ ಒಳ್ಳೆಯ ರೀತಿ ಸ್ಪಂದಿಸುತ್ತಿದ್ದಾರೆ. ಅವರಿಗೆ ಇನ್ನು ಎರಡು ದಿನಗಳ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುತ್ತದೆ. ಊಟಕ್ಕೆ ಗಂಜಿ ಕೊಡಲಾಗುತ್ತಿದೆ. ಬೇರೆ ಆಸ್ಪತ್ರೆಗೆ ರವಾನೆ ಮಾಡೋ ಅವಶ್ಯಕತೆ ಇಲ್ಲ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ. ರವಿ ಪಾಟೀಲ್ ತಿಳಿಸಿದ್ದಾರೆ.‌

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಬೆಳಗ್ಗೆಯಿಂದ ಚಿಕಿತ್ಸೆ ನೀಡುತ್ತಿದ್ದ ವೈದ್ಯ ಮಾತನಾಡಿದ್ದು, ಏರ್ ಬ್ಯಾಗ್ ಓಪನ್ ಆಗಿ ಬ್ಲಾಸ್ಟ್ ಆಗಿದ್ದರಿಂದ ಚಾಲಕನಿಗೆ ಹೆಬ್ಬೆಟ್ಟಿಗೆ ಗಾಯವಾಗಿದೆ. ಗನ್ ಮ್ಯಾನ್ ಭುಜ ಮತ್ತು ಎದೆಗೆ ಗಾಯವಾಗಿದೆ, ಗಂಭೀರ ಗಾಯವಾಗಿಲ್ಲ. ಲಕ್ಷ್ಮೀ ಹೆಬ್ಬಾಳ್ಕರ್ ಗೆ ಇನ್ನು ಎರಡು ದಿನಗಳ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುತ್ತದೆ. ಊಟಕ್ಕೆ ಗಂಜಿ ಕೊಡಲಾಗುತ್ತಿದೆ. ಬೇರೆ ಆಸ್ಪತ್ರೆಗೆ ದಾಖಲು ಮಾಡೋ ಅವಶ್ಯಕತೆ ಇಲ್ಲ. ನಮ್ಮ ಆಸ್ಪತ್ರೆಯಲ್ಲಿಯೇ ತಜ್ಞ ವೈದ್ಯರು ಇದ್ದಾರೆ, ಚಿಕಿತ್ಸೆ ಮುಂದುವರೆಸುತ್ತೇವೆ ಎಂದರು.

ಕಾರು ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಚೆನ್ನರಾಜ ಹಟ್ಟಿಹೊಳಿ ಗಾಯವಾಗಿ ನಮ್ಮ ಆಸ್ಪತ್ರೆಗೆ ಬಂದಿದ್ರು. ಕಾರಿನಲ್ಲಿದ್ದ ನಾಲ್ವರು ಬೆಳಿಗ್ಗೆ 6ಕ್ಕೆ ಆಸ್ಪತ್ರೆಗೆ ಆಗಮಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಗೆ ಬೆನ್ನು ಮತ್ತು ಕುತ್ತಿಗೆ ಭಾಗಕ್ಕೆ ಗಾಯವಾಗಿತ್ತು. ಬಳಿಕ ಪ್ರಾಥಮಿಕ ಚಿಕಿತ್ಸೆ ಕೊಡಲಾಗಿದೆ. ನಂತರ ಲಕ್ಷ್ಮೀ ‌ಹೆಬ್ಬಾಳ್ಕರ್ ಗೆ ಎಂಆರ್‌ಐ ಸ್ಕ್ಯಾನಿಂಗ್ ಮಾಡಲಾಗಿತ್ತು. ಸ್ಕ್ಯಾನಿಂಗ್ ನಲ್ಲಿ ಬೆನ್ನಿನಲ್ಲಿರುವ L1- L4 ಎಲುಬುಗಳಿಗೆ ಫ್ಯಾಕ್ಚರ್ ಆಗಿದೆ ಎಂಬುದು ದೃಢವಾಗಿದೆ. ಹಾಗಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಗೆ ನೋವು ಹೆಚ್ಚಾಗಿದೆ, ಅವರಿಗೆ ಚಿಕಿತ್ಸೆ ಕೊಡಲಾಗುತ್ತಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಚಿಕಿತ್ಸೆಗೆ ಒಳ್ಳೆಯ ರೀತಿ ಸ್ಪಂದಿಸುತ್ತಿದ್ದಾರೆ. ಚೆನ್ನರಾಜ ಹಟ್ಟಿಹೊಳಿ ತಲೆಗೆ ಪೆಟ್ಟಾಗಿದ್ದು ಸಿಟಿ ಸ್ಕ್ಯಾನ್ ಮಾಡಿದ್ದೇವೆ. ಚೆನ್ನರಾಜ ಹಟ್ಟಿಹೊಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅವರನ್ನ ಸಂಜೆ ಡಿಸ್ಚಾರ್ಜ್ ಮಾಡಲಾಗಿದೆ ಎಂದರು.‌

Edited By : Manjunath H D
PublicNext

PublicNext

14/01/2025 09:21 pm

Cinque Terre

36.5 K

Cinque Terre

13

ಸಂಬಂಧಿತ ಸುದ್ದಿ