ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕೆಯುಡಬ್ಲೂಜೆ ವಾರ್ಷಿಕ ಪ್ರಶಸ್ತಿಗೆ ಹುಬ್ಬಳ್ಳಿಯ ಪತ್ರಕರ್ತರು ಆಯ್ಕೆ.!

ಹುಬ್ಬಳ್ಳಿ: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಹುಬ್ಬಳ್ಳಿಯ ಇಬ್ಬರೂ ಪತ್ರಕರ್ತರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಹುಬ್ಬಳ್ಳಿಯ ವಿಜಯವಾಣಿಯ ಮರಿದೇವ ಹೂಗಾರ ಹಾಗೂ ಸಂಜೆ ಮಾಧ್ಯಮದ ಗುರುರಾಜ ಹೂಗಾರ ಆಯ್ಕೆಯಾಗಿದ್ದಾರೆ.

ತುಮಕೂರಿನಲ್ಲಿ ಜನವರಿ 18 ಮತ್ತು 19 ರಂದು ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಅವರು ತಿಳಿಸಿದ್ದಾರೆ.

ತಗಡೂರು ಕಮಲಮ್ಮ ವೀರೇಗೌಡ ಪ್ರಶಸ್ತಿ (ರೈತಾಪಿ ಜನರ ಸಮಸ್ಯೆ ವರದಿಗಾಗಿ) ಗೆ ವಿಜಯವಾಣಿ ಹುಬ್ಬಳ್ಳಿ ಆವೃತ್ತಿಯ ಮರಿದೇವ ಹೂಗಾರ್, ಕೆಯುಡಬ್ಲ್ಯೂಜೆ ವಿಶೇಷ ಪ್ರಶಸ್ತಿಗೆ ಗುರುರಾಜ ಹೂಗಾರ್ ಆಯ್ಕೆಯಾಗಿದ್ದಾರೆ. ಪ್ರಶಸ್ತಿಗೆ ಆಯ್ಕೆಯಾದ ಸಾಧಕರಿಗೆ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಭಿನಂದನೆ ಸಲ್ಲಿಸಿದೆ.

Edited By : Nagaraj Tulugeri
Kshetra Samachara

Kshetra Samachara

14/01/2025 10:41 pm

Cinque Terre

11.65 K

Cinque Terre

0

ಸಂಬಂಧಿತ ಸುದ್ದಿ