ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಮಕರ ಸಂಕ್ರಾಂತಿ ಸಂಭ್ರಮಕ್ಕೆ ವರ್ಷದ ಮೊದಲ ಮಳೆಯ ಸಿಂಚನ - ಭಕ್ತರು ಪುಳಕ

ಉಡುಪಿ: ಶ್ರೀಕೃಷ್ಣಮಠದಲ್ಲಿ ಮಕರ ಸಂಕ್ರಾಂತಿ ಉತ್ಸವವು ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ಮಂಗಳವಾರ ರಾತ್ರಿ ಸಂಪನ್ನಗೊಂಡಿತು.

ಮಧ್ವಸರೋವರದಲ್ಲಿ ತೆಪ್ಪೋತ್ಸವ ನಡೆದ ಬಳಿಕ ರಥೋತ್ಸವ ನಡೆಯಿತು. ತೆಪ್ಪೋತ್ಸವ ಮುಗಿಯುವ ಹೊತ್ತಿಗೆ ಮಳೆ ಆರಂಭಗೊಂಡಿತು. ಮಳೆಯ ಮಧ್ಯೆಯೂ ಬ್ರಹ್ಮರಥ ಸಹಿತ ಮೂರು ತೇರುಗಳ ಉತ್ಸವವನ್ನು ಕಿಕ್ಕಿರಿದ ಭಕ್ತಜನಸಂದಣಿ ಕಣ್ತುಂಬಿಕೊಂಡಿತು. ಭಕ್ತರು ಕೊಡೆಗಳನ್ನು ಹಿಡಿದು ರಥಾರೂಢ ದೇವರ ದರ್ಶನವನ್ನು ಮಾಡಿದರು.

ಬ್ರಹ್ಮ ರಥ, ಗರುಡ ರಥ, ಸಣ್ಣ ರಥಗಳಲ್ಲಿ ಶ್ರೀಕೃಷ್ಣ, ಮುಖ್ಯಪ್ರಾಣ, ಅನಂತೇಶ್ವರ, ಚಂದ್ರಮೌಳೀಶ್ವರ ದೇವರ ಉತ್ಸವ ಮೂರ್ತಿಗಳನ್ನು ಪೂಜಿಸಿ ಉತ್ಸವ ನಡೆಸಲಾಯಿತು. ಅದಮಾರು ಮಠದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು, ಪುತ್ತಿಗೆ ಮಠದ ಕಿರಿಯ ಯತಿ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ಸಹಿತ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

Edited By : Ashok M
PublicNext

PublicNext

15/01/2025 10:35 am

Cinque Terre

14.04 K

Cinque Terre

0

ಸಂಬಂಧಿತ ಸುದ್ದಿ