ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಚಿವೆ ಲಕ್ಷ್ಮಿ ಹೆಬ್ಬಾಳಕರ ಕಾರು ಅಪಘಾತ: ಸಿ.ಟಿ.ರವಿ ಹೇಳಿದ್ದೇನು?

ಬೆಂಗಳೂರು: ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಶೀಘ್ರ ಗುಣಮುಖರಾಗಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಪ್ರಾರ್ಥಿಸಿದ್ದಾರೆ.

ಹೌದು.ಇತ್ತೀಚೆಗೆ ನಡೆದ ಚಳಿಗಾಲದ ಅಧಿವೇಶನದಲ್ಲಿ ಸಿ.ಟಿ.ರವಿ ಅವರು ತಮ್ಮ ವಿರುದ್ಧ ಅವಾಚ್ಯ ಪದ ಬಳಸಿದ್ದಾರೆಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗಂಭೀರ ಆರೋಪ ಮಾಡಿದ್ದರು. ಘಟನೆ ಸಂಬಂಧ ಅದೇ ದಿನ ಸಿ.ಟಿ. ರವಿ ಅವರನ್ನು ಪೊಲೀಸರು ಬಂಧಿಸಿದ್ದರು. ಮಾರನೇ ದಿನ ಅವರಿಗೆ ಜಾಮೀನು ಸಿಕ್ಕಿತ್ತು. ಈ ಘಟನೆ ಎರಡು ಪಕ್ಷಗಳ ನಡುವೆ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿತ್ತು. ಸಚಿವೆಯ ಆರೋಪವನ್ನು ಸಿ.ಟಿ. ರವಿ ತಳ್ಳಿಹಾಕಿದ್ದರು. ಇದನ್ನೆಲ್ಲ ಮರೆತು ಸಿ ಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗಾಗಿ ಪ್ರಾರ್ಥನೆ ಮಾಡಿದ್ದು ಕೆಲವರಿಗೆ ಅಚ್ಚರಿಯನ್ನು ಮೂಡಿಸಿದೆ.

ಈ ಕುರಿತಂತೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರವಿ, 'ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಮತ್ತು ಅವರ ಸಹೋದರ ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ' ಎಂದು ಹೇಳಿದ್ದಾರೆ.

ಸಿಎಲ್‌ಪಿ ಸಭೆ ಮುಗಿಸಿ ಬೆಂಗಳೂರಿನಿಂದ ಬೆಳಗಾವಿಗೆ ಹಿಂದಿರುಗುತ್ತಿದ್ದ ವೇಳೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಅಪಘಾತಕ್ಕೀಡಾಗಿತ್ತು. ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಕಾರಿಗೆ ನಾಯಿ ಅಡ್ಡ ಬಂದಿದ್ದು, ಅದನ್ನು ತಪ್ಪಿಸಲು ಹೋಗಿ ಕಾರು ಚಾಲಕ ಎಡಕ್ಕೆ ತಿರುಗಿಸಿದ್ದಾರೆ. ಈ ವೇಳೆ ಕಾರು ಮರಕ್ಕೆ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಲಕ್ಷ್ಮಿ ಹೆಬ್ಬಾಳಕರ ಅವರ ಬೆನ್ನು ಮೂಳೆ ಸೀಳಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ಅವರ ಮುಖ, ತಲೆಗೆ ಗಾಯಗಳಾಗಿದ್ದು, ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ.

Edited By : Vijay Kumar
PublicNext

PublicNext

15/01/2025 11:12 am

Cinque Terre

28.41 K

Cinque Terre

1