ಕನ್ನಡ ಚಿತ್ರರಂಗ ಹಿರಿಯ ನಟ ಸರಿಗಮ ವಿಜಿ ಅವರು ಇಂದು ಯಶಂಪುರದ ಬಳಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಸರಿಗಮ ವಿಜಿ ಅವರಿಗೆ 76 ವರ್ಷ ವಯಸ್ಸಾಗಿತ್ತು. ಅವರು ಕಳೆದ ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು. ವಿಜಿ ಅವರಿಗೆ ಶ್ವಾಸಕೋಶದ ಸಮಸ್ಯೆ ಎದುರಾಗಿತ್ತು. ಯಶಂಪುರದ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ನ್ಯುಮೋನಿಯಾಗೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ವಿಜಿ ಅವರು ಇಂದು (ಜನವರಿ 15) ಬೆಳಿಗ್ಗೆ 9:45ಕ್ಕೆ ನಿಧನ ಹೊಂದಿದ್ದಾರೆ.
PublicNext
15/01/2025 11:26 am