", "articleSection": "Education,Government", "image": { "@type": "ImageObject", "url": "https://prod.cdn.publicnext.com/s3fs-public/222042-1736921803-Add-a-heading---2025-01-15T114636.959.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Padmashree" }, "editor": { "@type": "Person", "name": "Vijay.Kumar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಬೆಂಗಳೂರು: ಸಿಇಟಿ ಅರ್ಜಿ ಭರ್ತಿ ಮಾಡುವುದನ್ನು ಸರಳಗೊಳಿಸುವ ಮತ್ತು ಹಾಲಿ ಇರುವ ವ್ಯವಸ್ಥೆಗೆ ಮತ್ತಷ್ಟು ಭದ್ರತಾ ಉಪಕ್ರಮಗಳನ್ನು ಅಳವಡಿಸುವ ಮ...Read more" } ", "keywords": "CET application, mobile registration, cyber centers, Bangalore, Karnataka news, CET exam, online application, KCET registration. ,Bangalore,Bagalkot,Education,Government", "url": "https://publicnext.com/node" }
ಬೆಂಗಳೂರು: ಸಿಇಟಿ ಅರ್ಜಿ ಭರ್ತಿ ಮಾಡುವುದನ್ನು ಸರಳಗೊಳಿಸುವ ಮತ್ತು ಹಾಲಿ ಇರುವ ವ್ಯವಸ್ಥೆಗೆ ಮತ್ತಷ್ಟು ಭದ್ರತಾ ಉಪಕ್ರಮಗಳನ್ನು ಅಳವಡಿಸುವ ಮೂಲಕ ಹೊಸ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮಲ್ಲೇಶ್ವರದ ಕಚೇರಿಯಲ್ಲಿ ನಡೆದ ಹೆಚ್ಚುವರಿ ಕಟ್ಟಡ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಂಕುಸ್ಥಾಪನೆ ಮಾಡಿದರು. ಇದೇ ಸಂದರ್ಭದಲ್ಲಿ ಕೆಸೆಟ್-24ರಲ್ಲಿ ಅರ್ಹರಾದ ಅಭ್ಯರ್ಥಿಗಳಿಗೆ ಸಾಂಕೇತಿಕವಾಗಿ ಮುಖ್ಯಮಂತ್ರಿಯವರು ಪ್ರಮಾಣ ಪತ್ರ ವಿತರಿಸಿದರು.
ನಂತರ ಸಚಿವ ಸುಧಾಕರ್ ಅವರು ಮಾತನಾಡಿ, ಗ್ರಾಮೀಣ ಭಾಗದವರು ಸೈಬರ್ ಕೇಂದ್ರಗಳಿಗೆ ಹೋಗದೇ ಮೊಬೈಲ್ ಮೂಲಕವೇ ಸಿಇಟಿ ಅರ್ಜಿ ಭರ್ತಿ ಮಾಡುವ ಹಾಗೆ ಮಾಡಲಾಗುವುದು. ಅಕ್ರಮಗಳಿಗೂ ಅವಕಾಶ ಇಲ್ಲದಂತೆ ಭದ್ರತಾ ಕ್ರಮಗಳನ್ನೂ ಸೇರಿಸಲಾಗುವುದು. ಸದ್ಯದಲ್ಲೇ ಹೊಸ ವ್ಯವಸ್ಥೆಗೆ ಚಾಲನೆ ನೀಡಲಾಗುವುದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಸಚಿವರು ನೇಮಕಾತಿ ಪರೀಕ್ಷೆಗಳಿಗೆ ಒಮ್ಮೆ ಮಾತ್ರ ನೋಂದಣಿ ಮಾಡುವ ವ್ಯವಸ್ಥೆಯ ಪೋರ್ಟಲ್‌ಗೂ ಚಾಲನೆ ನೀಡಿದರು. ಒಮ್ಮೆ ನೋಂದಣಿ ಮಾಡಿದವರು ವಿವಿಧ ರೀತಿಯ ನೇಮಕಾತಿ ಪರೀಕ್ಷೆಗಳಿಗೆ ಪದೇ ಪದೇ ಅರ್ಜಿ ಭರ್ತಿ ಮಾಡುವ ಅಗತ್ಯ ಇರುವುದಿಲ್ಲ. ನಿರ್ದಿಷ್ಟ ಸಂಖ್ಯೆಯನ್ನು ನಮೂದಿಸುವುದರ ಮೂಲಕ ಪರೀಕ್ಷಾ ಶುಲ್ಕ ಕಟ್ಟಿ ಅರ್ಹತೆಯನ್ನು ಪಡೆಯಬಹುದು. ಇದು ಕೆಇಎ ಮಾಡಿರುವ ವಿನೂತನ ಕ್ರಮ ಎಂದು ಸಚಿವರು ವಿವರಿಸಿದರು.
PublicNext
15/01/2025 11:47 am