", "articleSection": "Politics,Law and Order", "image": { "@type": "ImageObject", "url": "https://prod.cdn.publicnext.com/s3fs-public/378325-1736922443-1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Praveen Onkari" }, "editor": { "@type": "Person", "name": "somashekar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಧಾರವಾಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ಭ್ರಷ್ಟಾಚಾರ ನಡೆದಿದ್ದು, ಇದು ಲೋಕಾಯುಕ್ತದ ಮೂಲಕ ಸೂಕ್ತ ತನಿಖೆಯಾಗುವುದಿಲ್ಲ. ಈ ಪ್...Read more" } ", "keywords": ",Hubballi-Dharwad,Politics,Law-and-Order", "url": "https://publicnext.com/node" }
ಧಾರವಾಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ಭ್ರಷ್ಟಾಚಾರ ನಡೆದಿದ್ದು, ಇದು ಲೋಕಾಯುಕ್ತದ ಮೂಲಕ ಸೂಕ್ತ ತನಿಖೆಯಾಗುವುದಿಲ್ಲ. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಸ್ನೇಹಮಯಿ ಕೃಷ್ಣ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಬೆಂಗಳೂರು ಹೈಕೋರ್ಟ್‌ನಲ್ಲಿ ಸ್ನೇಹಮಯಿ ಕೃಷ್ಣ ಅವರು ಅರ್ಜಿ ಸಲ್ಲಿಸಿದ್ದರು. ಈಗಾಗಲೇ ಈ ಅರ್ಜಿಯ ವಿಚಾರಣೆ ಸಾಕಷ್ಟು ನಡೆದಿದೆ. ಬೆಂಗಳೂರು ಹೈಕೋರ್ಟ್ ನ್ಯಾಯಮೂರ್ತಿಗಳು ಇಂದು ಧಾರವಾಡ ಹೈಕೋರ್ಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ಧಾರವಾಡ ಹೈಕೋರ್ಟ್ ಪೀಠದಲ್ಲಿ ನಡೆಯಲಿದೆ.
ಸ್ನೇಹಮಯಿ ಕೃಷ್ಣ ಹಾಗೂ ಅವರ ಪರ ವಕೀಲರಾದ ಮನಿಂಧರ್ ಸಿಂಗ್ ಕೂಡ ಧಾರವಾಡ ಹೈಕೋರ್ಟ್‌ಗೆ ಆಗಮಿಸಿದ್ದು, ಕೋರ್ಟ್ ಒಳ ಹೋಗುವ ಮುನ್ನ ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ ನೀಡಿದರು.
ಮುಡಾ ಹಗರಣ ಲೋಕಾಯುಕ್ತದ ಮೂಲಕ ಸರಿಯಾದ ತನಿಖೆ ಆಗುವುದಿಲ್ಲ. ಇದನ್ನು ಸಿಬಿಐಗೆ ವಹಿಸಬೇಕು ಎಂದು ಅರ್ಜಿ ಸಲ್ಲಿಸಿದ್ದೇನೆ. ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಇದರಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬ ಭಾಗಿಯಾಗಿದೆ. ಈ ಪ್ರಕರಣವನ್ನು ಸಿಬಿಐಗೆ ವಹಿಸುವ ಬಗ್ಗೆ ಇಂದು ಅಂತಿಮ ನಿರ್ಧಾರವಾಗುವ ಸಾಧ್ಯತೆ ಇದೆ ಎಂದರು.
ಬೈಟ್ 1: ಸ್ನೇಹಮಯಿ ಕೃಷ್ಣ.
ಸದ್ಯ ಧಾರವಾಡ ಹೈಕೋರ್ಟ್‌ನಲ್ಲಿ ಈ ಅರ್ಜಿಯ ವಿಚಾರಣೆ ನಡೆಯಲಿದ್ದು, ಇಂದೇ ಅರ್ಜಿಯ ಇತ್ಯರ್ಥವಾಗುತ್ತಾ ಅಥವಾ ಮತ್ತೊಂದು ದಿನ ಅರ್ಜಿ ವಿಚಾರಣೆ ನಡೆಸುವುದಾಗಿ ಹೇಳಿ ಮುಂದೂಡುತ್ತಾ ಕಾದು ನೋಡಬೇಕಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
15/01/2025 11:57 am