ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೇಗ ಗುಣಮುಖರಾಗಲೆಂದು ಹಿರೇಬಾಗೇವಾಡಿಯ ಉದ್ಭವ ಮೂರ್ತಿ ಪಡೀಬಸವೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿದೆ.
ಕಾರು ಅಪಘಾತವಾದ ಬಳಿಕ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ವೃದ್ಧಿಗಾಗಿ ಧನ್ವಂತರಿ ಪೂಜಾ ಸೇರಿ ವಿವಿಧ ಪೂಜೆ ಮಾಡಿ, ಮಹಾ ಅಭಿಷೇಕ ಮೂಲಕ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೇಗ ಗುಣಮುಖರಾಗಲಿ ಎಂದು ಪ್ರಾರ್ಥನೆ ಮಾಡಲಾಗಿದೆ. ಗ್ರಾಮದ ಹಿರಿಯರು, ಕಾಂಗ್ರೆಸ್ ಕಾರ್ಯಕರ್ತರು, ಹೆಬ್ಬಾಳ್ಕರ್ ಬೆಂಬಲಿಗರು ಪೂಜೆಯಲ್ಲಿ ಭಾಗಿಯಾಗಿದ್ದಾರೆ.
PublicNext
15/01/2025 12:19 pm