", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/52563-1736931786-7960aeef-f584-4203-9976-bde47a28ce8f.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SharathRaju" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ಗುರುವಾರ ನಡೆಯುವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆಯಾಗುವ ಸಾಧ್ಯತೆ ಇರುವ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದ್ದೆ ಇದಕ್ಕೆ ಪ...Read more" } ", "keywords": "Whenever Siddaramaiah faces a thorn in his side, he is reminded of the caste census: R Ashok,Bangalore,Bangalore-Rural,Politics", "url": "https://publicnext.com/node" }
ಬೆಂಗಳೂರು : ಗುರುವಾರ ನಡೆಯುವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆಯಾಗುವ ಸಾಧ್ಯತೆ ಇರುವ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದ್ದೆ ಇದಕ್ಕೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್ ಅಶೋಕ್ ಸಂಕಟ ಬಂದಾಗ ವೆಂಕಟರಮಣ ಎಂಬಂತೆ ಸಿಎಂ ಸಿದ್ದರಾಮಯ್ಯನವರಿಗೆ ತಮ್ಮ ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ಜಾತಿ ಜನಗಣತಿ ನೆನಪಾಗುತ್ತದೆ ಎಂದು ವ್ಯಂಗ್ಯ ವಾಡಿದ್ರು.
ಈ ಕುರಿತಂತೆ ಟ್ವಿಟ್ ಮಾಡಿರು ಆರ್ ಆಶೋಕ್, ಜಾತಿ ಜನಗಣತಿ ಬಗ್ಗೆ ಬಿಜೆಪಿ ಪಕ್ಷಕ್ಕಾಗಲಿ ಅಥವಾ ವೈಯಕ್ತಿಕವಾಗಿ ನನಗಾಗಲಿ ಯಾವ ತಕರಾರು ಇಲ್ಲ ಅಥವಾ ವಿರೋಧವೂ ಇಲ್ಲ. ಬಿಜೆಪಿಯ ಮೂಲಸಿದ್ಧಾಂತವಾದ 'ಅಂತ್ಯೋದಯ'ದ ಪರಿಕಾಲ್ಪನೆಯಲ್ಲೇ ತಳ ಸಮುದಾಯಗಳನ್ನ ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂಬ ಸಾಮಾಜಿಕ ನ್ಯಾಯದ ಬದ್ಧತೆ ಅಡಗಿದೆ. ಅದನ್ನ ಸಾಕಾರಗೊಳಿಸುವ ಯಾವ ಪ್ರಾಮಾಣಿಕ ಪ್ರಯತ್ನಕ್ಕಾದರೂ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ. ಆದರೆ ರಾಜಕೀಯ ಚದುರಂಗದಾಟದಲ್ಲಿ ಜಾತಿ ಜನಗಣತಿಯನ್ನು ದಾಳವಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ವಿರೋಧವಿದೆ.
ರಾಜಕೀಯ ಹಾವು-ಏಣಿ ಆಟದಲ್ಲಿ ಕೆಳಗೆ ಬಿದ್ದಾಗ ಮೇಲೇಳಲು, ಕುರ್ಚಿ ಉಳಿಸಿಕೊಳ್ಳಲು ಜಾತಿಗಣತಿಯನ್ನ ಏಣಿಯಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ತಕರಾರಿದೆ ಎಂದು ದೂರಿದರು.
Kshetra Samachara
15/01/2025 02:33 pm