ಹುಬ್ಬಳ್ಳಿ: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಇಂದಿನಿಂದ ಆರಂಭಗೊಂಡಿರುವ ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿದ್ಯುಕ್ತವಾಗಿ ಚಾಲನೆ ನೀಡಿದರು.
ಹುಬ್ಬಳ್ಳಿಯ ಕೂಗಳತೆಯ ದೂರದಲ್ಲಿರುವ ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಸಂಪ್ರದಾಯ ವಿಧಿ ವಿಧಾನಗಳ ಮೂಲಕ ಘಟಸ್ಥಾಪನೆ ಮಾಡಿ ದ್ವಾರ ಪೂಜೆ ನೆರವೇರಿಸಿದ ಬಳಿಕ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಮಹಾಮಸ್ತಕಾಭಿಷೇಕದ ಹಿನ್ನೆಲೆಯಲ್ಲಿ ನಿರ್ಮಾಣ ಮಾಡಿರುವ ವೇದಿಕೆಯ ದ್ವಾರವನ್ನು ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಿ, ಲೋಕ ಕಲ್ಯಾಣ ಹಾಗೂ ಸಮಾಜದ ಸರ್ವಜನಾಂಗದ ಏಳಿಗೆಗೆ ಸಂಕಲ್ಪ ಮಾಡುವ ಮೂಲಕ ವಿಶೇಷ ರೀತಿಯಲ್ಲಿ ಪೂಜೆ ಸಲ್ಲಿಸಲಾಯಿತು. ಜೈನ ಧರ್ಮದ ಸಾಂಪ್ರದಾಯಿಕ ಶೈಲಿಯಲ್ಲಿ ಪೂಜೆಯನ್ನು ಸಲ್ಲಿಸಿದ್ದಾರೆ.
ಇನ್ನು ಕಾರ್ಯಕ್ರಮದಲ್ಲಿ ಗುಣಧರನಂದಿ ಮಹಾರಾಜರು, ಸಂಜಯ ಪಾಟೀಲ, ಜೈನ ಆಚಾರ್ಯರು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
15/01/2025 03:10 pm