ಬೆಂಗಳೂರು: ಚಾಮರಾಜಪೇಟೆ ಗೋವಿನ ಮೇಲೆ ದೌರ್ಜನ್ಯ ಪ್ರಕರಣ ಸಂಬಂಧ ಪಟ್ಟ ಹಾಗೇ ಘಟನೆ ಖಂಡಿಸಿ ಇಂದು ಬಿಜೆಪಿ ರೈತ ಮೋರ್ಚಾದಿಂದ ಪ್ರತಿಭಟನೆ ನಡೆಯುತ್ತಿದೆ.
ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ಭಾಗಿ ಆಗಿದ್ದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರು, ರೈತ ಮೋರ್ಚಾ ಮುಖಂಡರು ಭಾಗಿಯಾಗಿದ್ದು, ಸರ್ಕಾರದ ವಿರುದ್ಧ ಘೋಷಣೆಗಳ ಕೂಗಿದ್ರು. ನಿನ್ನಯಷ್ಟೇ ಚಾಮರಾಜಪೇಟೆಯ ಘಟನಾ ಸ್ಥಳದಲ್ಲಿ ಸಂಕ್ರಾಂತಿ ಆಚರಣೆ ಮಾಡಿದ್ದ ಬಿಜೆಪಿ ನಾಯಕರು ಇವತ್ತು ಕೂಡ ಘಟನೆ ಖಂಡಿಸಿ ರೈತ ಮೋರ್ಚಾದಿಂದ ಪ್ರತಿಭಟನೆ ನಡೆಸಿದೆ. ಪ್ರಕರಣದ ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ಮಾಡಲಾಗಿದೆ.
PublicNext
15/01/2025 03:49 pm