", "articleSection": "Public News", "image": { "@type": "ImageObject", "url": "https://prod.cdn.publicnext.com/s3fs-public/39640520250115044217filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SundarChamarajnagar" }, "editor": { "@type": "Person", "name": "112068327297121593490" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಾಮರಾಜನಗರ : ಪ್ರತಿಯೊಂದು ಜೀವವು ಅಮೂಲ್ಯವಾಗಿರುವುದರಿಂದ ರಸ್ತೆ ಸುರಕ್ಷತೆಯ ವ್ಯಾಪಕ ಅರಿವು, ಚಾಲನಾ ಜಾಗರೂಕತೆ ವಾಹನ ಚಲಾಯಿಸುವ ಪ್ರತಿಯೊಬ್ಬರಿ...Read more" } ", "keywords": "Node,Chamarajnagar,Public-News", "url": "https://publicnext.com/node" }
ಚಾಮರಾಜನಗರ : ಪ್ರತಿಯೊಂದು ಜೀವವು ಅಮೂಲ್ಯವಾಗಿರುವುದರಿಂದ ರಸ್ತೆ ಸುರಕ್ಷತೆಯ ವ್ಯಾಪಕ ಅರಿವು, ಚಾಲನಾ ಜಾಗರೂಕತೆ ವಾಹನ ಚಲಾಯಿಸುವ ಪ್ರತಿಯೊಬ್ಬರಿಗೂ ಅವಶ್ಯವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತ ತಿಳಿಸಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಸಂಚಾರಿ ಪೊಲೀಸ್ ಠಾಣೆ ಹಾಗೂ ರೋಟರಿ ಸಿಲ್ಕ್ ಸಿಟಿ ಸಹಯೋಗದಲ್ಲಿ ಆಯೋಜಿಸಲಾಗಿದ್ದ 2024ರ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೈನಂದಿನ ಜೀವನದಲ್ಲಿ ಕೆಲವರನ್ನು ಹೊರತುಪಡಿಸಿ ಉಳಿದೆಲ್ಲರು ವಾಹನ ಚಾಲನೆಯಲ್ಲಿ ತೊಡಗಿರುವು ದು ಇತ್ತೀಚೆಗೆ ಸರ್ವೇಸಾಮಾನ್ಯವಾಗಿದೆ. ವಾಹನ ಗಳು ಸಾಕಷ್ಟು ಸಂಖ್ಯೆಯಲ್ಲಿ ರಸ್ತೆಗಿಳಿಯುತ್ತಿರುವುದ ರಿಂದ ಅಪಘಾತಗಳು ಹೆಚ್ಚಾಗಿವೆ. ರಸ್ತೆ ಅಪಘಾತಗ ಳನ್ನು ವ್ಯಾಪಕವಾಗಿ ತಡೆಯುವ ನಿಟ್ಟಿನಲ್ಲಿ ಪ್ರತಿವರ್ಷ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಂಡು ಜನಸಾಮಾನ್ಯರಿಗೆ ಅರಿವು ಮೂಡಿಸಲಾಗುತ್ತಿದೆ. ಮುಖ್ಯವಾಗಿ ರಸ್ತೆ ಸುರಕ್ಷತೆಯ ಅರಿವು ಶಾಲಾ ವಿದ್ಯಾರ್ಥಿಗಳಿಗೆ ಅತೀ ಅಗತ್ಯವಾಗಿದೆ ಎಂದರು.
ದೇಶದಲ್ಲಿ ಪ್ರತಿವರ್ಷ ರಸ್ತೆ ಅಪಘಾತಗಳಿಂದ 1 ಲಕ್ಷದ 84 ಸಾವಿರಕ್ಕೂ ಅಧಿಕ ಮಂದಿ ಮರಣ ಹೊಂದುತ್ತಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ಕಳೆದ ವರ್ಷ 234 ಅಪಘಾತ ಪ್ರಕರಣಗಳಲ್ಲಿ 256 ಮಂದಿ ಸಾವನಪ್ಪಿದ್ದಾರೆ. ವಾಹನ ಚಾಲನಾ ಸಮಯದಲ್ಲಿ ಅಜಾಗರೂಕತೆಯಿಂದ ಹೆಲ್ಮೆಟ್, ಸೀಟ್‍ಬೆಲ್ಟ್ ಹಾಕದಿರುವುದು, ಗಮನ ಬೇರೆಡೆ ಇರುವುದು ಹಾಗೂ ಮೊಬೈಲ್ ಬಳಕೆ ಇದಕ್ಕೆ ಪ್ರಮುಖ ಕಾರಣಗಳಾಗಿವೆ. ಈ ನಿಟ್ಟಿನಲ್ಲಿ ಪ್ರಜ್ಞಾವಂತ ನಾಗರಿಕರು ಎಚ್ಚರಿಕೆಯಿಂದ ರಸ್ತೆ ಸುರಕ್ಷತಾ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದರು.
ರಸ್ತೆ ಹಾಳಾಗಿದ್ದರೇ ಅಪಘಾತ ಪ್ರಮಾಣಗಳು ಕಡಿಮೆ. ಅದೇ ರಸ್ತೆಯನ್ನು ಉತ್ತಮವಾಗಿ ಅಭಿವೃದ್ಧಿಸಿದರೆ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿರುವುದು ವಿಷಾಧನೀಯ ಸಂಗತಿಯಾಗಿದೆ. ಎಲ್ಲಿಯೇ, ಯಾವುದೇ ಸಂದರ್ಭದಲ್ಲಿಯೇ ಆಗಲಿ ರಸ್ತೆ ಅಪಘಾತ ಕಂಡುಬಂದರೆ ಮೊದಲು ಜೀವ ಉಳಿಸಲು ಎಲ್ಲರು ಮುಂದಾಗಬೇಕು. ಅಪಘಾತಕ್ಕೊಳಗಾದ ವ್ಯಕ್ತಿಗೆ ಪ್ರಥಮ ಚಿಕಿತ್ಸೆ ನೀಡಿ ಹತ್ತಿರದ ಆಸ್ಪತ್ರೆಗೆ ಸೇರಿಸಬೇಕು. ಮುಂದಿನ ದಿನಗಳಲ್ಲಿ ಪ್ರಥಮ ಚಿಕಿತ್ಸೆಯ ಅರಿವು ಮೂಡಿಸಿ ರಸ್ತೆ ಅಪಘಾತ ಪ್ರಮಾಣ ಕಡಿಮೆ ಮಾಡಲು ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
Kshetra Samachara
15/01/2025 04:40 pm