ಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯ ವರೂರಿನಲ್ಲಿ ಜೈನ್ ತೀರ್ಥಂಕರರ ಮಹಾಮಸ್ತಕಾಭಿಷೇಕ ಆಯೋಜಿಸಲಾಗಿದ್ದು, ದಿಗಂಬರ ಜೈನ್ ನವಗ್ರಹ ತೀರ್ಥ ಕ್ಷೇತ್ರ ವರೂರ ನಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಆಗಮಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ವಿಶ್ವದ ಅತಿ ಎತ್ತರದ 406 ಅಡಿಯ ಸುಮೇರು ಪರ್ವತ ಜಿನಬಿಂಬ ಪ್ರತಿಷ್ಠಿತ ಹಾಗೂ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವದಲ್ಲಿ 61 ಅಡಿ ಎತ್ತರದ ಭಗವಾನ್ ಪಾರ್ಶ್ವನಾಥ ಮೂರ್ತಿಗೆ ಮಹಾಮಸ್ತಕಾಭಿಷೇಕ ನೇರವೇರಲಿದ್ದು, ಇಂದಿನಿಂದ 11 ದಿನಗಳ ಕಾಲ ನಡೆಯಲಿರುವ ಅದ್ದೂರಿ ಕಾರ್ಯಕ್ರಮವನ್ನು ರಾಜ್ಯಪಾಲರು ಉದ್ಘಾಟನೆ ಮಾಡಿದರು.
ಇನ್ನೂ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ, ವರೂರ ನವಗ್ರಹ ತೀರ್ಥ ಕ್ಷೇತ್ರದ ಗುಣಧರ ನಂದಿ ಸ್ವಾಮೀಜಿ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದು, ಜನಪ್ರತಿನಿಧಿಗಳು ಕೂಡ ಉಪಸ್ಥಿತರಿದ್ದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
15/01/2025 05:20 pm