ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಾಗಿನ ಅರ್ಪಣೆ ಯಶಸ್ವಿಗೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ

ಚಿತ್ರದುರ್ಗ.ಜ.15 ಬಯಲುಸೀಮೆ ಜನರ ಜೀವನಾಡಿ ವಾಣಿವಿಲಾರ ಜಲಾಶಯ ಭರ್ತಿಯಾಗಿದ್ದು, ಇದೇ ಜ.18 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿ.ವಿ ಸಾಗರ ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡಲಿದ್ದಾರೆ. ಕಾರ್ಯಕ್ರಮದ ಯಶಸ್ವಿಗೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸೂಚನೆ ನೀಡಿದರು.

ಹಿರಿಯೂರು ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ವಾಣಿವಿಲಾಸ ಸಾಗರ ಜಲಾಶಯದ ಬಾಗಿನ ಅರ್ಪಣೆ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

120 ವರ್ಷಗಳಲ್ಲಿ ಮೂರನೇ ಬಾರಿಗೆ ವಾಣಿವಿಲಾಸ ಸಾಗರ ಜಲಾಶಯ ತುಂಬಿದೆ. ಜ.18ರಂದು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಆಗಮಿಸಿ, ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡಲಿದ್ದು, ಸುಮಾರು 20 ರಿಂದ 24 ಸಾವಿರ ಜನ ಪಾಲ್ಗೊಳ್ಳಲಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕೆ ಜಿಲ್ಲೆಯ ಜನರು ಕುತೂಹಲ ಹಾಗೂ ಕಾತುರರಾಗಿದ್ದು, ಜಿಲ್ಲೆಯ ಪಾಲಿಗೆ ಇದೊಂದು ಸಂಭ್ರಮದ ಕ್ಷಣವಾಗಲಿದೆ ಎಂದು ಹೇಳಿದರು.

Edited By : PublicNext Desk
Kshetra Samachara

Kshetra Samachara

15/01/2025 05:25 pm

Cinque Terre

820

Cinque Terre

0

ಸಂಬಂಧಿತ ಸುದ್ದಿ