ಹೊಳಲ್ಕೆರೆ: ಪಟ್ಟಣದ ಹೊರವಲಯದಲ್ಲಿರುವ ಹನುಮಂತದೇವರ ಕಣಿವೆಯಲ್ಲಿ ₹ 7 ಕೋಟಿ ವೆಚ್ಚದಲ್ಲಿ ಐಟಿಐ ಕಾಲೇಜು ಕಟ್ಟಡ ನಿರ್ಮಿಸಲಾಗುವುದು ಎಂದು ಶಾಸಕ ಎಂ.ಚಂದ್ರಪ್ಪ ತಿಳಿಸಿದರು.ಕಾಲೇಜು ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಸರ್ಕಾರಿ ಐಟಿಐ ಕಾಲೇಜು ಪಟ್ಟಣದ ಶಿಥಿಲಗೊಂಡ ಕಟ್ಟಡವೊಂದರಲ್ಲಿ ನಡೆಯುತ್ತಿತ್ತು.
ಕಾಲೇಜು ಕಟ್ಟಡ ನಿರ್ಮಿಸಲು ಹಿಂದೆ ₹ 2.35 ಕೋಟಿ ಮಂಜೂರು ಮಾಡಿಸಿದ್ದೆ. ಆದರೆ, ಅಷ್ಟು ಹಣ ಕಾಲೇಜು ನಿರ್ಮಿಸಲು ಆಗುವುದಿಲ್ಲ ಎಂದು ಕಾಮಗಾರಿ ಆರಂಭಿಸಿರಲಿಲ್ಲ. ಈಗ ಮತ್ತೆ ₹ 4.5 ಕೋಟಿ ಅನುದಾನ ಮಂಜೂರು ಮಾಡಿಸಿದ್ದು, ಸುಸಜ್ಜಿತ ಕಟ್ಟಡ ನಿರ್ಮಿಸಲಾಗುವುದು. ಮುಂದೆ ಇಲ್ಲಿಯೇ ಒಂದು ಹಾಸ್ಟೆಲ್ ನಿರ್ಮಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲಾಗುವುದು ಎಂದರು.
Kshetra Samachara
15/01/2025 07:53 pm