ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ತಡರಾತ್ರಿವರೆಗೆ ಯಕ್ಷಗಾನದಲ್ಲಿ ಧ್ವನಿವರ್ಧಕ ಬಳಕೆ - ಎಸ್ಪಿ ಸ್ಪಷ್ಟನೆ

ಉಡುಪಿ: ಮಂಗಳವಾರ ರಾತ್ರಿ ಅಜೆಕಾರ್ ಪೊಲೀಸರಿಗೆ ಯಾವುದೇ ಮಾಹಿತಿ ನೀಡದೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ರಾತ್ರಿ ವೇಳೆ ಧ್ವನಿವರ್ಧಕ ಬಳಸುವುದರಿಂದ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರಿಂದ ಕರೆ ಬಂದಿದೆ. ಪೊಲೀಸರು ಹೋಗಿ ವಿಚಾರಿಸಿದಾಗ ಕಾರ್ಯಕ್ರಮ ಆಯೋಜಿಸಲು ಅನುಮತಿ ಪಡೆಯದಿರುವುದು, ಧ್ವನಿವರ್ಧಕ ಬಳಸಲು ಕೂಡ ಅನುಮತಿ ಪಡೆಯದೆ ಇರುವುದು ಕಂಡುಬಂದಿದೆ. ರಾತ್ರಿ 11.30 ಗಂಟೆಗೆ ಪೊಲೀಸರು ಧ್ವನಿವರ್ಧಕವನ್ನು ಬಳಸದಂತೆ ತಿಳಿಸಿದರೂ ಕೂಡ, ಅದನ್ನು ನಿರಾಕರಿಸಿ ಬೆಳಿಗ್ಗೆ 4.30 ಗಂಟೆಯವರೆಗೆ ಮುಂದುವರಿಸುತ್ತಾರೆ. ಹೀಗಾಗಿ ಯಾವುದೇ ಅನುಮತಿ ಪಡೆಯದೆ ರಾತ್ರಿ ವೇಳೆ ಧ್ವನಿವರ್ಧಕ ಬಳಸಿ ಕಾರ್ಯಕ್ರಮ ಆಯೋಜಿಸಿದ್ದಕ್ಕಾಗಿ ಆಯೋಜಕರ ಮೇಲೆ ಅಜೆಕಾರು ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 02/25 ಕಲಂ. 292 BNS ಮತ್ತು 37 KP Act. ರಂತೆ ಪ್ರಕರಣ ದಾಖಲಿಸಲಾಗಿದೆ.

ಸಾರ್ವಜನಿಕ ಸ್ಥಳದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಮತ್ತು ಧ್ವನಿವರ್ಧಕ ಬಳಸಲು ಅನುಮತಿಯ ಅಗತ್ಯವಿದೆ ಎಂದು ಈ ಮೂಲಕ ಸ್ಪಷ್ಟಪಡಿಸಲಾಗಿದೆ. ಮತ್ತು ಈ ಬಗ್ಗೆ ಸಾರ್ವಜನಿಕರಿಂದ ಯಾವುದೇ ದೂರುಗಳು ಬಂದಲ್ಲಿ, ಅದನ್ನು ಗೌರವಾನ್ವಿತ ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳಿಗೆ ಅನುಗುಣವಾಗಿ ಪರಿಶೀಲಸಿ ಕ್ರಮ ಕೈಗೊಳ್ಳಲು ಪೊಲೀಸರು ಬದ್ಧರಾಗಿರುತ್ತಾರೆ ಎಂದು ಎಸ್ಪಿ ಸ್ಪಷ್ಟಪಡಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

15/01/2025 08:48 pm

Cinque Terre

4.15 K

Cinque Terre

0

ಸಂಬಂಧಿತ ಸುದ್ದಿ