", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/229640-1737006988-karana.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "JayashekarKundapur" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕುಂದಾಪುರ: ಹೊಸದಾಗಿ ಖರೀದಿಸಿದ ಜಮೀನು ನೋಂದಣಿ ಮಾಡಲು ಹೋದ ಮಹಿಳೆಯೊಬ್ಬರು ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ಗ್ರಾಮಾಂತರ ಪೊ...Read more" } ", "keywords": "Kundapura news, Woman commits suicide, Land registration, Depression, Karnataka news, Udupi district, Suicide case, Tragic incident, Kundapura police, Investigation underway.,Udupi,Mangalore,Crime,Law-and-Order", "url": "https://publicnext.com/node" } ಕುಂದಾಪುರ: ಜಮೀನು ನೋಂದಣಿಗೆ ಹೋಗಿ ಬಂದ ಮಹಿಳೆ ಹೊಳೆಗೆ ಹಾರಿ ಆತ್ಮಹತ್ಯೆ!
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಜಮೀನು ನೋಂದಣಿಗೆ ಹೋಗಿ ಬಂದ ಮಹಿಳೆ ಹೊಳೆಗೆ ಹಾರಿ ಆತ್ಮಹತ್ಯೆ!

ಕುಂದಾಪುರ: ಹೊಸದಾಗಿ ಖರೀದಿಸಿದ ಜಮೀನು ನೋಂದಣಿ ಮಾಡಲು ಹೋದ ಮಹಿಳೆಯೊಬ್ಬರು ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಳ್ಕೂರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಬಳ್ಕೂರಿನ ನಿವಾಸಿ, ಸಮೀಪದ ಪಾನಕದ ಕಟ್ಟೆ ಎಲ್ಲಿ ಹೇರ್ ಸೆಲೂನ್ ನಡೆಸುತ್ತಿದ್ದ ವಿನಯ್ ಭಂಡಾರಿ ಎಂಬುವರ ಪತ್ನಿ ಶ್ರುತಿ (33) ಎಂದು ಗುರುತಿಸಲಾಗಿದೆ.

ಶೃತಿ ಹಾಗೂ ವಿನಯ್ ಅಂತರ್ಜಾತಿ ವಿವಾಹವಾಗಿದ್ದರು. ಸಾಲಿಗ್ರಾಮದ ಮೂಲದ ಶೃತಿ ಬ್ರಾಹ್ಮಣರಾಗಿದ್ದು ಕಾಲೇಜು ಸಂದರ್ಭದಲ್ಲಿ ವಿನಯ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಪ್ರಸ್ತುತ ಬಳ್ಕೂರು ಸಮೀಪದ ಬಿಹೆಚ್ ಎಂಬಲ್ಲಿ ನೆಲೆಸಿದ್ದ ವಿನಯ್ ಹಾಗೂ ಶೃತಿ ದಂಪತಿ, ಬಳ್ಕೂರಿನಲ್ಲಿ ಜಾಗ ಖರೀದಿ ಮಾಡಿದ್ದರು ಎನ್ನಲಾಗಿದೆ. ಈ ಸಂಬಂಧ ಬುಧವಾರ ಜಾಗದ ನೋಂದಣಿಗೆ ಹೋಗಿ ಬಂದಿದ್ದರು.

ಬಳಿಕ ಶ್ರುತಿ ಅವರು ತನ್ನ ಸ್ಕೂಟಿಯಲ್ಲಿ ಬಳ್ಕೂರು ಸಮೀಪದ ಹೊಳೆಯ ಬದಿಗೆ ಹೋಗಿದ್ದು ಅಲ್ಲಿ ಸ್ಕೂಟಿಯನ್ನು ನಿಲ್ಲಿಸಿ, ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆ ತಿಳಿದ ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ಶೋಧ ಕಾರ್ಯ ನಡೆಸಿದ್ದಾರೆ. ಬುಧವಾರ ಸಂಜೆ ಮೃತದೇಹವನ್ನು ಮೇಲಕ್ಕೆತ್ತಿ ಕುಂದಾಪುರದ ಶವಾಗಾರದಲ್ಲಿ ಇರಿಸಲಾಗಿದೆ. ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಗೆ ಸರಿಯಾದ ಕಾರಣ ತಿಳಿದು ಬಂದಿಲ್ಲ. ಆದರೆ ಯಾವುದೋ ಹಣಕಾಸಿನ ವ್ಯವಹಾರದಲ್ಲಿ ಮೋಸವಾಗಿರುವ ಬಗ್ಗೆ ಅಲ್ಲಲ್ಲಿ ಚರ್ಚೆಗಳು ನಡೆಯುತ್ತಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಶ್ರುತಿ ಅವರಿಗೆ ಹತ್ತನೇ ತರಗತಿ ಓದುತ್ತಿರುವ ಪುತ್ರಿ ಇದ್ದಾರೆ.

Edited By : Manjunath H D
PublicNext

PublicNext

16/01/2025 11:26 am

Cinque Terre

27.29 K

Cinque Terre

0

ಸಂಬಂಧಿತ ಸುದ್ದಿ