", "articleSection": "Politics,Infrastructure,Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/421698-1737012027-A3~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Praveen Onkari" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಕೇಳಿ ಬಂದಿರುವ ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಸ್ನೇಹಮಯಿ ಕೃಷ್ಣ ಅವರು ಹೈ...Read more" } ", "keywords": ",Hubballi-Dharwad,Politics,Infrastructure,Crime,Law-and-Order", "url": "https://publicnext.com/node" }
ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಕೇಳಿ ಬಂದಿರುವ ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಸ್ನೇಹಮಯಿ ಕೃಷ್ಣ ಅವರು ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯ ಅಂತಿಮ ಹಂತದ ವಿಚಾರಣೆ ಜ.27 ರಂದು ನಡೆಯಲಿದೆ. ಆ ಮೂಲಕ ಸಿಎಂ ಸಿದ್ದರಾಮಯ್ಯ ಅವರ ಭವಿಷ್ಯ ನಿರ್ಧಾರವಾಗುವುದರ ಜೊತೆಗೆ ಮುಡಾ ಪ್ರಕರಣ ಸಿಬಿಐಗೆ ವರ್ಗಾವಣೆಯಾಗುತ್ತಾ? ಎಂಬ ಪ್ರಶ್ನೆ ಮೂಡಿದೆ.
ಇಂದು ಧಾರವಾಡ ಹೈಕೋರ್ಟ್‌ನಲ್ಲಿ ಅರ್ಜಿಯ ವಿಚಾರಣೆ ನಡೆಯಿತು. ಸುಮಾರು ಅರ್ಧ ಗಂಟೆಗಳ ಕಾಲ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಪೀಠ ಎದುರುದಾರರಿಗೆ ತಕರಾರು ಅರ್ಜಿ ಸಲ್ಲಿಸಲು ಹೇಳಿ ಅಂತಿಮವಾಗಿ ಜ.27 ಕ್ಕೆ ಅರ್ಜಿಯ ವಿಚಾರಣೆ ನಡೆಸುವುದಾಗಿ ಹೇಳಿ ಮುಂದೂಡಿತು.
ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಸ್ನೇಹಮಯಿ ಕೃಷ್ಣ ಪರ ವಕೀಲರಾದ ವಸಂತಕುಮಾರ, ಬೆಂಗಳೂರಿನಲ್ಲಿ ಎರಡ್ಮೂರು ಬಾರಿ ವಿಚಾರಣೆ ನಡೆದಿತ್ತು. ಮುಡಾ ಸಂಬಂಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಈ ಹಗರಣದ ಪ್ರಾಮಾಣಿಕ ತನಿಖೆಯಾಗಬೇಕಾದರೆ ಇದನ್ನು ಸಿಬಿಐಗೆ ವಹಿಸಬೇಕು ಎಂದು ಅರ್ಜಿ ಸಲ್ಲಿಸಿದ್ದೆವು. ನಾವು ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದೆವು. ಲೋಕಾಯುಕ್ತ ಸಂಸ್ಥೆ ರಾಜ್ಯ ಸರ್ಕಾರದ ಕೈಗೊಂಬೆಯಂತೆ ಕೆಲಸ ಮಾಡುತ್ತದೆ ಎಂದು ನಾವು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ ಮುಡಾ ಪ್ರಕರಣವನ್ನು ಸಿಬಿಐಗೆ ಕೊಡುವಂತೆ ಕೇಳಿಕೊಂಡಿದ್ದೇವೆ ಎಂದರು.
ಸ್ನೇಹಮಯಿ ಕೃಷ್ಣ ಅವರ ಪರ ವಕೀಲರಾದ ಮಣಿಂದರ್ ಸಿಂಗ್ ಸುದೀರ್ಘವಾದ ವಾದ ಮಂಡಿಸಿದ್ದಾರೆ. ಉಳಿದ ಪಿಟಿಷನರ್‌ಗಳ ಆಕ್ಷೇಪಣೆಗಳ ಕಾಪಿಗಳನ್ನು ನಾವು ಇಂದು ಬೆಳಿಗ್ಗೆ ಪಡೆದಿದ್ದೇವೆ. ಇಡಿಯನ್ನೂ ಇದರಲ್ಲಿ ಸೇರ್ಪಡೆ ಮಾಡಿಕೊಳ್ಳಲು ಕೇಳಿಕೊಂಡಿದ್ದೇವೆ. ಇದನ್ನೆಲ್ಲ ಆಲಿಸಿ ಜ.27 ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ. ಇ.ಡಿ. ಸಹ ಈಗಾಗಲೇ ಇದರ ತನಿಖೆ ನಡೆಸುತ್ತಿದ್ದು, ಪ್ರಕರಣದಲ್ಲಿ ಇ.ಡಿ.ಯನ್ನೂ ಸೇರ್ಪಡೆ ಮಾಡಿಕೊಳ್ಳುವಂತೆ ಕೇಳಿದ್ದೇವೆ ಎಂದರು
Kshetra Samachara
16/01/2025 12:50 pm