", "articleSection": "Crime", "image": { "@type": "ImageObject", "url": "https://prod.cdn.publicnext.com/s3fs-public/52563-1737014128-cef362e6-86ad-4134-acda-41fbdec4e9b9.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೀದರ್ : ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿಗಳ ಮೇಲೆ ಗುಂಡಿನ ದಾಳಿ ನಡೆಸಿದ ದರೋಡೆಕೋರರು ಹಣ ಎಗರಿಸಿ ಎಸ್ಕೇಪ್ ಆದ ಘಟನೆ ಗೆ ಬೀದರ್‌ನ ಎಸ್‌ಬಿ...Read more" } ", "keywords": "Bidar, ATM, cash loading, staff attack, gunshot attack, Karnataka news, India news, crime news, Bidar news, ATM cash loading, staff safety, Karnataka, India, news, update, Bidar, ATM attack, cash loading staff, gunshot, crime, Bidar crime, ATM security, cash handling, Karnataka police, India police.,,Crime", "url": "https://publicnext.com/node" }
ಬೀದರ್ : ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿಗಳ ಮೇಲೆ ಗುಂಡಿನ ದಾಳಿ ನಡೆಸಿದ ದರೋಡೆಕೋರರು ಹಣ ಎಗರಿಸಿ ಎಸ್ಕೇಪ್ ಆದ ಘಟನೆ ಗೆ ಬೀದರ್‌ನ ಎಸ್‌ಬಿಐ ಮುಖ್ಯ ಕಚೇರಿ ಮುಂದೆ ನಡೆದಿದೆ.
ATMಗೆ ಹಣ ಹಾಕಲು ಬಂದ ಸಿಬ್ಬಂದಿಗೆ ದುಷ್ಕರ್ಮಿಗಳು ಕಣ್ಣಿಗೆ ಖಾರದ ಪುಡಿ ಎರಚಿ, ಗುಂಡು ಹಾರಿಸಿ ಹಣದ ಸಮೇತ ಪರಾರಿಯಾಗಿದ್ದಾರೆ. ಗುಂಡು ಹಾರಿಸಿದ ಪರಿಣಾಮ ಎಸ್‌ಬಿಐ ಬ್ಯಾಂಕ್ ಸಿಬ್ಬಂದಿ ಸ್ಥಳದಲ್ಲೇ ಉಸಿರು ನಿಲ್ಲಿಸಿದ್ದಾರೆ.
ಎಟಿಎಂಗೆ ಹಣ ಹಾಕಬೇಕು ಅನ್ನುವಷ್ಟರಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ಐದು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ಓರ್ವ ಸ್ಥಳದಲ್ಲೇ ಬಲಿಯಾಗಿದ್ದು, ಮತ್ತೋರ್ವ ಸಿಬ್ಬಂದಿಗೆ ಗಂಭೀರ ಗಾಯಗಳಾಗಿವೆ. ಇನ್ನೂ, ಖರೀಮರು ಹಣದ ಪೆಟ್ಟಿಗೆಯನ್ನು ತೆಗೆದುಕೊಂಡು ಹೋಗುತ್ತಿರೋ ದೃಶ್ಯ ಸ್ಥಳೀಯರ ಫೋನ್ನಲ್ಲಿ ಸೆರೆಯಾಗಿದೆ. ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
16/01/2025 01:25 pm