", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/52563-1737015060-Untitled-design-(36).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Vishwanath" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಪುತ್ತೂರು: ಕಾರು ಢಿಕ್ಕಿಯಾಗಿ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಬಂಟ್ವಾ...Read more" } ", "keywords": "Puttur, road accident, scooter, car collision, Karnataka news, India news, accident news, Puttur news, Karnataka, India, news, update, scooter rider death, car accident, Puttur, road safety, accident, car, collision, India news.,Udupi,Mangalore,Accident", "url": "https://publicnext.com/node" } ಪುತ್ತೂರು : ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ- ಸ್ಕೂಟರ್‌ ಸವಾರ ಸಾವು
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು : ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ- ಸ್ಕೂಟರ್‌ ಸವಾರ ಸಾವು

ಪುತ್ತೂರು: ಕಾರು ಢಿಕ್ಕಿಯಾಗಿ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಬಂಟ್ವಾಳ ತಾಲೂಕಿನ ಪೇರಮುಗೇರು ಸತ್ತಿಕಲ್ಲು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಕುದ್ಮಾನ್ ನಿವಾಸಿ ಉಸ್ಮಾನ್ (24) ಮೃತಪಟ್ಟವರು.

ವೃತ್ತಿಯಲ್ಲಿ ಪೈಂಟರ್ ಆಗಿದ್ದ ಉಸ್ಮಾನ್ ಸ್ಕೂಟರ್‌ನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಸತ್ತಿಕಲ್ಲಿನಲ್ಲಿ ರಸ್ತೆ ಬದಿಯಲ್ಲಿ ಸ್ಕೂಟರ್ ನಿಲ್ಲಿಸಿ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ನೋಂದಣಿಯಾಗದ ಕಾರೊಂದು ಏಕಾಏಕಿ ಅವರ ಸ್ಕೂಟರ್‌ಗೆ ಢಿಕ್ಕಿಯಾಗಿತ್ತು. ಪರಿಣಾಮ ಸ್ಕೂಟರ್ ನಲ್ಲಿ ಕುಳಿತಿದ್ದ ಉಸ್ಮಾನ್ ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಘಟನೆಯಿಂದ ಕಾರು ಮತ್ತು ಬೈಕ್ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದಿದೆ. ಪುತ್ತೂರು ಸಂಚಾರಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

16/01/2025 01:41 pm

Cinque Terre

15.87 K

Cinque Terre

0