", "articleSection": "Government,Agriculture", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/399529_1737018420_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "AnandChitradurga" }, "editor": { "@type": "Person", "name": "9742704237" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿತ್ರದುರ್ಗ : ಭದ್ರಾ ಜಲಾಶಯದಿಂದ ವಿವಿ ಸಾಗರಕ್ಕೆ ನೀರು ಹರಿಸುವ ವಿಚಾರದಲ್ಲಿ ಭಾರತೀಯ ರೈತ ಒಕ್ಕೂಟದ ದಾವಣಗೆರೆ ಜಿಲ್ಲೆ ಪದಾಧಿಕಾರಿಗಳು ವಿರೋಧ ...Read more" } ", "keywords": "Davangere District, Farmers Protest, Agricultural Issues, Administrative Officers, Rural Unrest, Karnataka Farmers, Agricultural Crisis, Protest Against Authorities.,Chitradurga,Government,Agriculture", "url": "https://publicnext.com/node" } ಚಿತ್ರದುರ್ಗ : ದಾವಣಗೆರೆ ಜಿಲ್ಲಾ ಪದಾಧಿಕಾರಿಗಳ ವಿರುದ್ಧ ರೈತರ ಆಕ್ರೋಶ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ : ದಾವಣಗೆರೆ ಜಿಲ್ಲಾ ಪದಾಧಿಕಾರಿಗಳ ವಿರುದ್ಧ ರೈತರ ಆಕ್ರೋಶ

ಚಿತ್ರದುರ್ಗ : ಭದ್ರಾ ಜಲಾಶಯದಿಂದ ವಿವಿ ಸಾಗರಕ್ಕೆ ನೀರು ಹರಿಸುವ ವಿಚಾರದಲ್ಲಿ ಭಾರತೀಯ ರೈತ ಒಕ್ಕೂಟದ ದಾವಣಗೆರೆ ಜಿಲ್ಲೆ ಪದಾಧಿಕಾರಿಗಳು ವಿರೋಧ ವ್ಯಕ್ತಪಡಿಸುತ್ತಿರುವುದಕ್ಕೆ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ತೀವ್ರವಾಗಿ ಖಂಡಿಸುತ್ತದೆ. ರಾಜಕೀಯ ಹೇಳಿಕೆಗಳ ನೀಡಿ ರೈತರ ಭಾವನಾತ್ಮಕವಾಗಿ ಪ್ರಚೋದಿಸುವ ಕೆಲಸ ಯಾರೂ ಮಾಡಬಾರದೆಂದು ಸಮಿತಿ ವಿನಂತಿಸುತ್ತದೆ.

ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಮಿತಿ ಪದಾಧಿಕಾರಿಗಳು ಭದ್ರಾ ಜಲಾಶಯದಲ್ಲಿ ನಮ್ಮ ಪಾಲಿನ ನೀರು ಪಡೆಯಲು ಯಾರ ಅಪ್ಪಣೆಯೂ ಬೇಕಿಲ್ಲ ಎಂದಿದ್ದಾರೆ.

ಭದ್ರಾ ಮತ್ತು ತುಂಗಾ ನದಿಯಲ್ಲಿ ಬಯಲು ಸೀಮೆ ಪ್ರದೇಶಗಳಿಗೆ 29.90 ಟಿಎಂಸಿ ನೀರು ಹಂಚಿಕೆಯಾಗಿ ಎರಡು ದಶಕಗಳು ಕಳೆದಿವೆ. 17.4 ಟಿಎಂಸಿ ತುಂಗಾ ನದಿ ಹಾಗೂ 12.5 ಟಿಎಂಸಿ ಯಷ್ಟು ಭದ್ರಾ ನದಿಯಲ್ಲಿ ಪಾಲು ನೀಡಲಾಗಿದೆ. ಭದ್ರಾ ಮೇಲ್ದಂಡೆ ಕಾಮಗಾರಿ ಶೇ.50 ರಷ್ಟು ಪೂರ್ಣಗೊಂಡಿದೆ. ಇಂತಹ ಸಂದರ್ಭದಲ್ಲಿ ಖ್ಯಾತೆ ತೆಗೆಯುವುದು ಬಯಲು ಸೀಮೆ ರೈತರ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ಭದ್ರಾ ಮೇಲ್ದಂಡೆಯಡಿ ತುಂಗಾದಲ್ಲಿ ಅತಿಹೆಚ್ಚು ನೀರಿನ ಪಾಲು ಇದೆ. ಜಗಳೂರಿಗೂ ಯೋಜನೆಯಡಿ ನೀರು ಪೂರೈಕೆಯಾಗುತ್ತಿದ್ದು ದಾವಣಗೆರೆ ರೈತರು ಭದ್ರಾ ಮೇಲ್ದಂಡೆ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಒತ್ತಾಯಿಸಿ ಚಿತ್ರದುರ್ಗ ಜಿಲ್ಲೆ ರೈತರ ಹೋರಾಟಕ್ಕೆ ದನಿ ಗೂಡಿಸಬೇಕೇ ವಿನಹ ಅಪಸ್ವರ ಎತ್ತಬಾರದು ಎಂದರು.

ಲಭ್ಯತೆ ಆಧಾರದ ಮೇಲೆ ಸರ್ಕಾರ ಬಯಲು ಸೀಮೆಗೆ ನದಿ ನೀರು ಹಂಚಿಕೆ ಮಾಡಿದೆ. ಕೃಷ್ಣಾ ಟ್ರಿಬ್ಯುನಲ್ ನಲ್ಲಿ 21.5 ಟಿಎಂಸಿ, ಗೋದಾವರಿ ಜಲ ಹಂಚಿಕೆಯಲ್ಲಿ 2.40 ಟಿಎಂಸಿ, ವಿಜಯನಗರ ಕಾಲುವೆ ಆಧುನೀಕರಣ ಸೇರಿದಂತೆ ಇತರೆ ಸಣ್ಣ ನೀರಾವರಿ ಯೋಜನೆಗಳಿಂದ ಲಭ್ಯವಾದ 6 ಟಿಎಂಸಿ ನೀರು ಸೇರಿದಂತೆ ಒಟ್ಟು 29.90 ಟಿಎಂಸಿ ನೀರನ್ನು ಭದ್ರಾ ಮೇಲ್ದಂಡೆ ಯೋಜನೆಗೆ ಕಾಯ್ದಿರಿಸಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. 2.25 ಲಕ್ಷ ಹೆಕ್ಟೇರು ಪ್ರದೇಶಗಳಿಗೆ ನೀರುಣಿಸಲಾಗುತ್ತಿದೆ.

ನೀರಾವರಿ ಅನುಷ್ಟಾನ ಹೋರಾಟ ಸಮಿತಿಯ ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಜೆ.ಯಾದವರೆಡ್ಡಿ, ಕೆ.ಸಿ.ಹೊರಕೇರಪ್ಪ, ಹಂಪಯ್ಯನ ಮಾಳಿಗೆ ಧನಂಜಯ, ಆರ್.ಬಿ.ನಿಜಲಿಂಗಪ್ಪ, ಕಬ್ಬಿಗೆರೆ ನಾಗರಾಜ್, ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಆರ್.ದಯಾನಂದ, ಸಂಚಾಲಕ ಚಿಕ್ಕಪ್ಪನಹಳ್ಳಿ ಷಣ್ಮುಖ, ರೈತ ಸಂಘದ ಮುಖಂಡರಾದ ಮಲ್ಲಾಪುರ ತಿಪ್ಪೇಸ್ವಾಮಿ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಚಂದ್ರಶೇಖರ ನಾಯ್ಕ, ಬಾಗೇನಹಾಳು ಕೊಟ್ರಬಸಪ್ಪ, ಹಳಿಯೂರು ಸಿದ್ದಪ್ಪ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Edited By : PublicNext Desk
PublicNext

PublicNext

16/01/2025 02:37 pm

Cinque Terre

19.1 K

Cinque Terre

0

ಸಂಬಂಧಿತ ಸುದ್ದಿ