ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ : ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ

ಉಡುಪಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡುವ ರಾಜ್ಯಮಟ್ಟದ ಉತ್ತಮ ಸಂಘ ಪ್ರಶಸ್ತಿಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘವು ಆಯ್ಕೆಯಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವ ಹಿನ್ನೆಲೆ ಮತ್ತು 2024ನೇ ಸಾಲಿನಲ್ಲಿ ಸಂಘ ಹಮ್ಮಿಕೊಂಡಿರುವ ನಿರಂತರ ಹಾಗೂ ಅತ್ಯುತ್ತಮ ಕಾರ್ಯ ಚಟುವಟಿಕೆ ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ತುಮಕೂರಿನಲ್ಲಿ ಜನವರಿ 18 ಮತ್ತು 19ರಂದು ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದರು.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು 2024ನೇ ಸಾಲಿನಲ್ಲಿ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಚಾಲನೆ, ಸಂವಾದ, ಸ್ಥಾಪನಾ ದಿನಾಚರಣೆ, ಚುನಾವಣಾ ಮಾಹಿತಿ ಕಾರ್ಯಾಗಾರ, ಸಾಮಾಜಿಕ ಬದ್ಧತೆಯ ಕಾರ್ಯಕ್ರಮ, ಪತ್ರಕರ್ತರ ಪರ ಹೋರಾಟ, ಚರ್ಚಾ ಕಾರ್ಯಕ್ರಮ ಪತ್ರಿಕಾ ದಿನಾಚರಣೆ, ಜನಜಾಗೃತಿ ಕಾರ್ಯಕ್ರಮ, ಗ್ರಂಥಾಲಯ ಉದ್ಘಾಟನೆ, ವಾರ್ಷಿಕ ಪ್ರವಾಸ, ರಜತ ಕ್ರೀಡಾ ಸಂಭ್ರಮ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿದೆ.

ಅಲ್ಲದೆ ಉಡುಪಿ ಪತ್ರಕರ್ತರ ಸಂಘವು 2024 ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೂ ಕೂಡ ಭಾಜನವಾಗಿದೆ. ಅದೇ ರೀತಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘವು ತುಮಕೂರಿನಲ್ಲಿ ನಡೆಸಿದ ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟದಲ್ಲಿ ಉಡುಪಿ ತಂಡವು ಸಮಗ್ರ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಈ ಎಲ್ಲಾ ಸಾಧನೆಯನ್ನು ಪರಿಗಣಿಸಿ ರಾಜ್ಯ ಅತ್ಯುತ್ತಮ ಸಂಘ ಪ್ರಶಸ್ತಿಯನ್ನು ಜಿಲ್ಲಾ ಸಂಘಕ್ಕೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

Edited By : PublicNext Desk
Kshetra Samachara

Kshetra Samachara

16/01/2025 03:14 pm

Cinque Terre

390

Cinque Terre

0

ಸಂಬಂಧಿತ ಸುದ್ದಿ