ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಡುಬಿದ್ರಿ : 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಪಡುಬಿದ್ರಿ : ಕಳೆದ 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

2010ರಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲೆಯ ರಮೇಶ ಎಂಬಾತನನ್ನು ಬಂಧಿಸಲಾಗಿತ್ತು.

ಆರೋಪಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಜೈಲಿನಿಂದ ಬಿಡುಗಡೆ ಹೊಂದಿ ಸುಮಾರು 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈತನನ್ನು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನಲ್ಲಿ ಪತ್ತೆ ಹಚ್ಚಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

Edited By : PublicNext Desk
PublicNext

PublicNext

16/01/2025 03:43 pm

Cinque Terre

10 K

Cinque Terre

0

ಸಂಬಂಧಿತ ಸುದ್ದಿ