ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ : ಬ್ಯಾಕ್ ಲಾಗ್ ಹುದ್ದೆ ಭರ್ತಿಗೆ ಆಗ್ರಹ - ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

ಹಾಸನ : ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಹಾಗೂ ಎಸ್ಸಿ ಎಸ್ಟಿ ಪದವೀಧರ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯಾದರು ಇಂದು ಪ್ರತಿಭಟನೆ ನಡೆಸಿದರು.

ನೂರಾರು ಸಂಖ್ಯೆಯ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿ ತಮಟೆ ಬಡಿಯುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ದಸಂಸ ಮುಖಂಡ ಕೃಷ್ಣದಾಸ್ ಮಾತನಾಡಿ, ಸಂವಿಧಾನದ ಅಡಿಯಲ್ಲಿ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಆಶಯದ ಅಡಿಯಲ್ಲಿ ಕೆಲಸ ಮಾಡಬೇಕಾಗಿರುವ ಸರ್ಕಾರಗಳು ಸಮಾನತೆ ಕಾಪಾಡುವಲ್ಲಿ ವಿಫಲವಾಗಿವೆ. ಹಲವು ವರ್ಷಗಳಿಂದ ಕರ್ನಾಟಕ ರಾಜ್ಯದಲ್ಲಿ ಸರ್ಕಾರದಲ್ಲಿ ಹಿಂಬಾಕಿ ಹುದ್ದೆಗಳು ಬಾಕಿ ಇದ್ದರು ಈವರೆಗೆ ಅವುಗಳನ್ನು ಭರ್ತಿ ಮಾಡಲು ಮುಂದಾಗದೆ ಇರುವುದು ವಿಪರ್ಯಾಸ ಎಂದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ದಲಿತರಿಗೆ ಇಲ್ಲದ ಆಮಿಷಗಳನ್ನು ನೀಡಿ ಅಧಿಕಾರಕ್ಕೆ ಬಂದಿದೆ ಆದರೆ ಇದೀಗ ಹಲವು ವರ್ಷಗಳಿಂದ ಬ್ಯಾಕ್ಲಾಗ್ ಹುದ್ದೆಗಳು ಬಾಕಿ ಇದ್ದರೂ ಅವುಗಳನ್ನು ಭರ್ತಿ ಮಾಡಲು ಮುಂದಾಗಿಲ್ಲ. ಸುಮ್ಮನೆ ನಾಮಕಾತಿಗೆ ತಾವು ದಲಿತರ ಪರ ಎಂದು ಹೇಳುವ ಕಾಂಗ್ರೆಸ್ ನಾಯಕರು ಈ ಬಗ್ಗೆ ಹಿಂಜರಿಕೆ ಏಕೆ ಎಂದು ಪ್ರಶ್ನಿಸಿದ್ದರು.

ಪ್ರತಿಭಟನೆಯಲ್ಲಿ ದಸಂಸ ಮುಖಂಡರಾದ ಅಂಬುಗ ಮಲ್ಲೇಶ್, ಚಂದ್ರಶೇಖರ್, ಭಾಸ್ಕರ್, ರಾಜೇಶ್, ತೋಟೇಶ್, ಮರಿ ಜೋಸೆಫ್ ಇತರರು ಇದ್ದರು

Edited By : PublicNext Desk
PublicNext

PublicNext

16/01/2025 05:09 pm

Cinque Terre

30.62 K

Cinque Terre

0

ಸಂಬಂಧಿತ ಸುದ್ದಿ