ಪುತ್ತೂರು : ಸ್ಕೂಟರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಬುಧವಾರ ಸಂಜೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ತಾಲೂಕಿನ ಪೆರಮುಗೇರು ಸತ್ತಿಕಲ್ಲು ಎಂಬಲ್ಲಿ ನಡೆದಿದೆ.
ಮೃತರನ್ನು ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಕುದ್ಮಾನ್ ನಿವಾಸಿ ಅಬ್ಬಾಸ್ ಎಂಬವರ ಪುತ್ರ ಉಸ್ಮಾನ್ (24) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಪೈಂಟರ್ ಆಗಿರುವ ಉಸ್ಮಾನ್, ತನ್ನ ಸ್ಕೂಟರ್ನಲ್ಲಿ ಮನೆಗೆ ತೆರಳುತ್ತಿದ್ದರು. ದಾರಿ ಮಧ್ಯೆ ಸತ್ತಿಕಲ್ಲಿನಲ್ಲಿ ರಸ್ತೆ ಬದಿ ಸ್ಕೂಟರ್ ನಿಲ್ಲಿಸಿ ಮೊಬೈಲ್ನಲ್ಲಿ ಮಾತನಾಡುತ್ತಿದ್ದರು.
ಈ ವೇಳೆ ನೋಂದಣಿಯಾಗದ ಕಾರೊಂದು ಏಕಾಏಕಿ ಅವರ ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ಉಸ್ಮಾನ್ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಘಟನೆಯಿಂದ ಕಾರು ಮತ್ತು ಬೈಕ್ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದಿದೆ. ಪುತ್ತೂರು ಸಂಚಾರಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
PublicNext
16/01/2025 05:23 pm