", "articleSection": "Infrastructure", "image": { "@type": "ImageObject", "url": "https://prod.cdn.publicnext.com/s3fs-public/286525-1737028528-WhatsApp-Image-2025-01-16-at-5.25.18-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Rahim Ujire Udupi" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಉಡುಪಿ: ಏಳು ವರ್ಷಗಳ ಹಿಂದೆ ಆರಂಭವಾದ ರಾಷ್ಟ್ರೀಯ ಹೆದ್ದಾರಿ 169 ಎ ಇದರ ಇಂದ್ರಾಳಿ ಸೇತುವೆ ಕಾಮಗಾರಿಯು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೂ...Read more" } ", "keywords": "Udupi Railway Bridge, Indrali Railway Bridge, Udupi News, Railway Development, Karnataka Infrastructure, Bridge Construction, Udupi City, Indian Railways, Railway Projects ,Udupi,Mangalore,Infrastructure", "url": "https://publicnext.com/node" }
ಉಡುಪಿ: ಏಳು ವರ್ಷಗಳ ಹಿಂದೆ ಆರಂಭವಾದ ರಾಷ್ಟ್ರೀಯ ಹೆದ್ದಾರಿ 169 ಎ ಇದರ ಇಂದ್ರಾಳಿ ಸೇತುವೆ ಕಾಮಗಾರಿಯು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೂಚಿಸಿದ ಅವಧಿಯಲ್ಲಿ ಪೂರ್ಣಗೊಳ್ಳದೇ ಕುಂಟುತ್ತಾ ಸಾಗುತ್ತಿದೆ. ಇದೀಗ ಜನವರಿ 15ರೊಳಗೆ ಪೂರ್ಣಗೊಳಿಸುವ ಕುರಿತು ಗುತ್ತಿಗೆದಾರರಿಂದ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಬರೆಸಿಕೊಳ್ಳಲಾದ ಮುಚ್ಚಳಿಕೆಯ ಅವಧಿ ಕೂಡ ನಿನ್ನೆಗೆ ಮುಕ್ತಾಯಗೊಂಡಿದೆ. ಈ ಮೂಲಕ ಸಂಸದರು ಹಾಗೂ ಅಧಿಕಾರಿಗಳು ನೀಡಿದ ಭರವಸೆ ಮತ್ತೆ ಸುಳ್ಳಾಗಿದೆ. ಈ ಮಧ್ಯೆ ಇನ್ನೂ ಪೂರ್ಣಗೊಳ್ಳದ ಕಾಮಗಾರಿ ವಿರುದ್ಧ ಸಾರ್ವಜನಿಕರು ಮತ್ತೊಮ್ಮೆ ಹೋರಾಟಕ್ಕೆ ಸಜ್ಜಾಗಿದ್ದಾರೆ.
ಪೂರಕ ಕಾಮಗಾರಿ ಸೇರಿದಂತೆ ಒಟ್ಟು 13 ಕೋಟಿ ರೂ. ವೆಚ್ಚದ 58 ಮೀಟರ್ ಉದ್ದದ ಇಂದ್ರಾಳಿ ಸೇತುವೆ ಕಾಮಗಾರಿಯು 2018ರಲ್ಲಿ ಆರಂಭಿಸಲಾಗಿತ್ತು. ಆದರೆ ವಿವಿಧ ಕಾರಣಗಳಿಂದ ವಿಳಂಬವಾಗಿ ಕುಂಟುತ್ತಾ ಸಾಗುತ್ತಿದೆ. ಇದರ ಪರಿಣಾಮವಾಗಿ ಇಲ್ಲಿ ನಡೆಯುತ್ತಿರುವ ನಿರಂತರ ಅಪಘಾತಗಳಿಂದ ಹಲವು ಜೀವಗಳು ಪ್ರಾಣ ಕಳೆದುಕೊಂಡಿವೆ. ಪ್ರತಿದಿನ ಸಂಚಾರ ಸಮಸ್ಯೆಯಿಂದ ಸಾರ್ವಜನಿಕರು ತೀರಾ ತೊಂದರೆ ಅನುಭವಿಸುತ್ತಿದ್ದಾರೆ.
ಕಳೆದ ವರ್ಷ 2024ರ ಜೂನ್ ತಿಂಗಳಲ್ಲಿ ಇಂದ್ರಾಳಿ ಸೇತುವೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ್ದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಸೆಪ್ಟೆಂಬರ್ 15ರೊಳಗೆ ಕಾಮಗಾರಿ ಪೂರ್ಣಗೊಳ್ಳುವ ಭರವಸೆ ನೀಡಿದ್ದರು. ಆ ಅವಧಿಗೂ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಮತ್ತು ಕಾಮಗಾರಿ ವಿಳಂಬ ವಿರೋಧಿಸಿ ಇಂದ್ರಾಳಿ ಸೇತುವೆ ಹೋರಾಟ ಸಮಿತಿ ಹೋರಾಟ ನಡೆಸಿತ್ತು.
ಈ ಮಧ್ಯೆ 2024ರ ಅಕ್ಟೋಬರ್ 23ರಂದು ಸ್ಥಳಕ್ಕೆ ಭೇಟಿ ನೀಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕಾಮಗಾರಿಯನ್ನು ಜನವರಿ 15ರ ಒಳಗೆ ಪೂರ್ಣಗೊಳಿಸುವ ಬಗ್ಗೆ ಗುತ್ತಿಗೆದಾರರಿಂದ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ ಎಂದು ತಿಳಿಸಿದ್ದರು. ಆದರೆ ಈ ಮುಚ್ಚಳಿಕೆ ಗಡುವು ಕೂಡ ಮುಗಿದಿದೆ. ಆದರೂ ಕಾಮಗಾರಿ ಕೊನೆಯ ಹಂತಕ್ಕೆ ಬಂದಿಲ್ಲ. ಸದ್ಯಕ್ಕೆ ಗರ್ಡರ್ ಗಳನ್ನು ಜೋಡಿಸಿ ಇಡಲಾಗಿದೆ.ಇದೀಗ ಉಡುಪಿಯ ನಾಗರೀಕರ ತಾಳ್ಮೆ ಕಟ್ಟೆಯೊಡೆಯುತ್ತಿದ್ದು ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ಹೆಚ್ಚುತ್ತಿದೆ.
Kshetra Samachara
16/01/2025 05:25 pm