ಮುಂಬೈ: ಬಾಲಿವುಡ್‌ನ ಹಿರಿಯ ನಟ ಸೈಫ್ ಅಲಿ ಖಾನ್‌ಗೆ ದುಷ್ಕರ್ಮಿಯೊಬ್ಬ ಚಾಕು ಇರಿದಿದ್ದಾನೆ. ಗುರುವಾರ ನಸುಕಿನ ಜಾವ ಈ ಘಟನೆ ನಡೆದಿದೆ. ಕೂಡಲೇ ಸೈಫ್ ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಕುರಿತು ಮುಂಬೈ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಎನ್‌ಕೌಂಟರ್ ಸ್ಪೆಷಲಿಸ್ಟ್ ಖ್ಯಾತಿಯ ಪೊಲೀಸ್ ಅಧಿಕಾರಿ ದಯಾನಾಯಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತರ ಅಧಿಕಾರಿಗಳಿಂದ ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅವರು ತಮ್ಮ ಜೇಬಿನಲ್ಲಿ ಗನ್ ಇಟ್ಟುಕೊಂಡೇ ಬಂದಿದ್ದು ಸ್ಥಳೀಯರನ್ನು ಆಕರ್ಷಿಸಿದೆ.
PublicNext
16/01/2025 07:44 pm