ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಬಾಲಕಿಯ ಅತ್ಯಾಚಾರ, ಅಶ್ಲೀಲ ಚಿತ್ರ ವೈರಲ್ ಪ್ರಕರಣ - ಪೋಕ್ಸೋ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

ಉಡುಪಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಆಕೆಯ ಅಶ್ಲೀಲ ಭಾವಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿರುವ ಪ್ರಕರಣದ ಆರೋಪಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಪೋಕ್ಸೋ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಇಂದು ಆದೇಶ ನೀಡಿದೆ.

ಬ್ರಹ್ಮಾವರದ ರಫೀಕ್ (25) ಶಿಕ್ಷೆಗೆ ಗುರಿಯಾದ ಆರೋಪಿ. ರಿಕ್ಷಾ ಚಾಲಕನಾಗಿದ್ದ ರಫೀಕ್ ನೊಂದ ಬಾಲಕಿಯನ್ನು ಕಾಲೇಜಿಗೆ ಕರೆದುಕೊಂಡು ಹೋಗಿ ಬರುತ್ತಿದ್ದು ನಂತರ ಆಕೆಯ ಮೊಬೈಲ್‌ಗೆ ಕರೆ ಮಾಡಿ ಸಂದೇಶ ಕಳುಹಿಸಿ ತನ್ನನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ನಂತರ ಅವಳಿಂದ ಇನ್ ಸ್ಟಾಗ್ರಾಮ್ ಐಡಿ ಪಡೆದು ಅದರಲ್ಲಿ ಅವಳ ಭಾವಚಿತ್ರಗಳನ್ನು ಪಡೆದುಕೊಂಡು ಪ್ರೀತಿಸದಿದ್ದರೆ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಹೆದರಿಸಿದ್ದ.

ನಂತರ ಬಾಲಕಿ ಒಪ್ಪದಿದ್ದಾಗ ನಕಲಿ ಐಡಿ ಸೃಷ್ಟಿಸಿ ಅದರಿಂದ ಬಾಲಕಿಯನ್ನು ಸಂಪರ್ಕಿಸಿ, ಆರೋಪಿಯನ್ನು ಪ್ರೀತಿಸುವಂತೆ ತಿಳಿಸಿದ್ದ. ನಂತರವೂ ನೊಂದ ಬಾಲಕಿಯ ಅಶ್ಲೀಲ ಭಾವಚಿತ್ರವನ್ನು ಸೃಷ್ಟಿಸಿ ವೈರಲ್ ಮಾಡುವುದಾಗಿ ಹೆದರಿಸಿ, ಆಕೆಯನ್ನು ತನ್ನ ರಿಕ್ಷಾದಲ್ಲಿ ಕಾಲೇಜಿನಿಂದ ಮನೆಗೆ ಬಿಡುತ್ತೇನೆಂದು ಕರೆದುಕೊಂಡು ಬಂದು ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಎಸಗಿದ್ದ ಎಂದು ದೂರಲಾಗಿದೆ.

ಈ ವಿಚಾರವನ್ನು ಬೇರೆಯವರಿಗೆ ತಿಳಿಸಿದರೆ ಸಾಮಾಜಿಕ ಜಾಲತಾಣದಲ್ಲಿ ಭಾವಚಿತ್ರ ವೈರಲ್ ಮಾಡುವುದಾಗಿ ಬೆದರಿಸಿದ್ದ. ನಂತರ ನೊಂದ ಬಾಲಕಿಯ ತಮ್ಮನ ಹೆಸರಿನ ನಕಲಿ ಇನ್ ಸ್ಟಾಗ್ರಾಮ್ ಖಾತೆ ತೆರೆದು ಅದರಲ್ಲಿ ನೊಂದ ಬಾಲಕಿಯ ಅಶ್ಲೀಲ ಭಾವಚಿತ್ರ ಪೋಸ್ಟ್ ಮಾಡಿದ್ದ. ಈ ಬಗ್ಗೆ ನೊಂದ ಬಾಲಕಿಯ ತಂದೆ ಬ್ರಹ್ಮಾವರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರಂತೆ ನೊಂದ ಬಾಲಕಿಯನ್ನು ವಿಚಾರಿಸಿದಾಗ ಘಟನೆಯ ಬಗ್ಗೆ ತಿಳಿಸಿದ್ದಳು.

Edited By : PublicNext Desk
Kshetra Samachara

Kshetra Samachara

16/01/2025 08:53 pm

Cinque Terre

1.43 K

Cinque Terre

0

ಸಂಬಂಧಿತ ಸುದ್ದಿ