ಉಡುಪಿ: ಕರ್ನಾಟಕ ಲೋಕಸೇವಾ ಆಯೋಗ ಬೆಂಗಳೂರು ಇದರ ವತಿಯಿಂದ ಜನವರಿ 19 ಮತ್ತು 25ರಂದು ನಡೆಸಲಾಗುವ ವಿವಿಧ ಇಲಾಖೆಗಳ ಗ್ರೂಪ್ ಬಿ ವೃಂದದ ಹುದ್ದೆಗಳ ನೇಮಕಾತಿಗೆ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ಜಿಲ್ಲೆಯಲ್ಲಿ ನಿಗದಿಪಡಿಸಿದ ಒಟ್ಟು 7 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ.
ಈ ಕೇಂದ್ರಗಳಲ್ಲಿ ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಯುವಂತಾಗಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿಗದಿತ ಪರೀಕ್ಷಾ ಕೇಂದ್ರಗಳ ಸುತ್ತಲೂ 200ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ.ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023ರ ಕಲಂ 163 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
Kshetra Samachara
16/01/2025 08:56 pm