ಹಾಸನ : ಕೃಷಿ ಇಲಾಖೆ ವತಿಯಿಂದ ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ಸಂಪರ್ಕ ಕಲ್ಪಿಸುವ ಹಾಗೂ ಗ್ರಾಹಕರಲ್ಲಿ ಅರಿವು ಮೂಡಿಸುವ ಸಲುವಾಗಿ ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಜಾಗೃತಿ ಜಾಥಾಗೆ ಶಾಸಕ ಸ್ವರೂಪ್ ಪ್ರಕಾಶ್ ಚಾಲನೆ ನೀಡಿದರು.
ಜಿಲ್ಲಾ ಕ್ರೀಡಾಂಗಣದಿಂದ ಹೇಮಾವತಿ ಪ್ರತಿಮೆ ವರೆಗೂ ನಡೆದ ಜಾಥಾದಲ್ಲಿ ವಿವಿಧ ಕಲಾ ತಂಡಗಳು ಹಾಗೂ ಎತ್ತಿನಬಂಡಿಗಳೊಂದಿಗೆ ಕಾಲ್ನಡಿಗೆಯಲ್ಲಿ ಜಾಥಾ ತೆರಳಿ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್ ಪೂರ್ಣಿಮಾ, ನಗರಸಭೆ ಅಧ್ಯಕ್ಷ ಚಂದ್ರೇಗೌಡ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸಂಘ ಸಂಸ್ಥೆಗಳ ಮುಖಂಡರು, ಸಿರಿಧಾನ್ಯ ಬೆಳೆಗಾರರು ಭಾಗವಹಿಸಿ ಗಮನ ಸೆಳೆದರು.
PublicNext
17/01/2025 12:52 pm