ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೊಸದುರ್ಗ : ಸಿರಿಧಾನ್ಯ ಖರೀದಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು- ಸಚಿವ ಎನ್.ಚಲುವರಾಯಸ್ವಾಮಿ

ಹೊಸದುರ್ಗ : ಬೆಂಬಲ ಬೆಲೆಯಡಿ ಸಿರಿಧಾನ್ಯಗಳನ್ನು ಖರೀದಿಸಲು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರದಿಂದ ಪತ್ರ ಬರೆದು ಶಿಫಾರಸ್ಸು ಮಾಡಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ತಾಲ್ಲೂಕಿನ ಶ್ರೀರಾಂಪುರ ಹೋಬಳಿಯ ಮಲ್ಲಿಹಳ್ಳಿ ಗ್ರಾಮದ ಕೃಷಿಕ ಪ್ರಭುಲಿಂಗಪ್ಪ ಹಾಗೂ ಮಹೇಶ್ ಅವರ ಸಿರಿಧಾನ್ಯ ರೈತರ ಒಕ್ಕಲು ಕಣ ಹಾಗೂ ಕ್ಷೇತ್ರಕ್ಕೆ ಭೇಟಿ ನೀಡಿದ ಅವರು ರೈತರೊಂದಿಗೆ ಸಂವಾದ ನಡೆಸಿ, ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ಅತಿ‌ಹೆಚ್ಚು ಸಿರಿಧಾನ್ಯ ಬೆಳೆ ಬೆಳೆಯಲಾಗುತ್ತದೆ ಹೊಸದುರ್ಗ ತಾಲೂಕಿನಲ್ಲಿ .ಈ ಭಾಗದಲ್ಲಿ ಸಾಂಪ್ರದಾಯಿಕವಾಗಿಯೇ ಸಿರಿಧಾನ್ಯ ಬೆಳೆಯುವುದು ರೂಢಿಯಲ್ಲಿದೆ.ಕಡಿಮೆ ಮಳೆಯ ನಡುವೆ ಬರಿ ಇಬ್ಬನಿ ಆಧರಿಸಿ ವಾರ್ಷಿಕವಾಗಿ ಎರಡು ಬೆಳೆಗಳನ್ನು ರೈತರು ತೆಗೆಯುತ್ತಾರೆ. ಈ ಮೊದಲು ಸಿರಿಧಾನ್ಯಗಳಿಗೆ ಮಾರುಕಟ್ಟೆ ಇರಲಿಲ್ಲ. ಈಗ ಮಾರುಕಟ್ಟೆ ದೊರಕುತ್ತಿದೆ. ರಾಗಿ, ಭತ್ತ, ತೊಗರಿ ಮಾದರಿಯಲ್ಲಿ ಸಿರಿಧಾನ್ಯಗಳನ್ನು ಬೆಂಬಲ ಬೆಲೆಯಡಿ ಖರೀದಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದರು.

Edited By : PublicNext Desk
Kshetra Samachara

Kshetra Samachara

17/01/2025 03:21 pm

Cinque Terre

1.98 K

Cinque Terre

0

ಸಂಬಂಧಿತ ಸುದ್ದಿ