ಬೈಂದೂರು : ಮೀನುಗಾರಿಕೆಯ ವೇಳೆ ನಾಪತ್ತೆಯಾಗಿರುವ ನಾರಾಯಣ ಮೊಗವೀರ ಕುಟುಂಬಕ್ಕೆ ಮೀನುಗಾರರ ಸಂಕಷ್ಟ ಪರಿಹಾರ ನಿಧಿಯಡಿ ಮಂಜೂರಾದ ಪರಿಹಾರ ಮೊತ್ತವನ್ನು ಇನ್ನೆರಡು ದಿನದಲ್ಲಿ ನೀಡಿ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಆಗ್ರಹಿಸಿದ್ದಾರೆ.
ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಇಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಉಪಸ್ಥಿತಿಯಲ್ಲಿ ಮೀನುಗಾರಿಕೆ ಇಲಾಖೆ ಅಧಿಕಾರಿಗಳೊಂದಿಗೆ ಕ್ಷೇತ್ರದ ಮೀನುಗಾರಿಕೆ ಯೋಜನೆಗಳು ಹಾಗೂ ಮೀನುಗಾರರ ಸಮಸ್ಯೆಗಳ ಕುರಿತು ಚರ್ಚಿಸಿದ ಶಾಸಕರು ಜಿಲ್ಲಾಡಳಿತದ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಉಡುಪಿ ಜಿಲ್ಲಾ ಪಂಚಾಯತ್ ನಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಉಪಸ್ಥಿತಿಯಲ್ಲಿ ಮೀನುಗಾರಿಕೆ ಇಲಾಖೆ ಅಧಿಕಾರಿಗಳೊಂದಿಗೆ ಕ್ಷೇತ್ರದ ಮೀನುಗಾರಿಕೆ ಯೋಜನೆ ಹಾಗೂ ಮೀನುಗಾರರ ಸಮಸ್ಯೆಗಳ ಬಗ್ಗೆ ಚರ್ಚಿಸಿದ ಶಾಸಕರು ಜನವರಿ 2 ರಂದು ಪರ್ಸಿನ್ ಬೋಟ್ ನಲ್ಲಿ ಮೀನುಗಾರಿಕೆ ವೇಳೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ನಾಪತ್ತೆ ಆಗಿರುವ ಬಡ ಮೀನುಗಾರ ನಾರಾಯಣ ಮೊಗವೀರ ಇವರ ಸುಳಿವು ಸಿಗದೇ ಇರುವುದು ಅತ್ಯಂತ ದುಃಖದಾಯಕ ಸಂಗತಿ. ನಾರಾಯಣ ಮೊಗವೀರರ ಮನೆಗೆ ತೆರಳಿ ಅವರ ಕುಟುಂಬದ ದುಃಖದಲ್ಲಿ ಭಾಗಿಯಾಗಿರುತ್ತೇನೆ. ನಾಪತ್ತೆಯಾಗಿರುವ ಅವರನ್ನು ಹುಡುಕಲು ಜಿಲ್ಲಾಡಳಿತಕ್ಕೆ ಹಾಗೂ ಸಂಬಂದಿಸಿದ ಇಲಾಖೆಗೆ ಈಗಾಗಲೇ ಮನವಿ ಮಾಡಲಾಗಿದೆ. ಆದರೂ ಈವರೆಗೂ ಮೀನುಗಾರರನ್ನು ಹುಡುಕಲು ಇಲಾಖೆ ಹಾಗೂ ಜಿಲ್ಲಾಡಳಿತಕ್ಕೆ ಸಾಧ್ಯವಾಗದೆ ಇರುವುದು ಹಾಗೂ ಈ ಬಗ್ಗೆ ಅಗತ್ಯ ಮುತುವರ್ಜಿ ವಹಿಸದೇ ಇರುವುದು ಖಂಡನೀಯ. ಬಡ ಮೀನುಗಾರರ ನೋವಿಗೆ ಸ್ಪಂದಿಸುವ ಜಿಲ್ಲಾಡಳಿತ ಈ ಬಗ್ಗೆ ದಿವ್ಯ ನಿರ್ಲಕ್ಷ ತೋರಿದೆ ಎಂದು ಜಿಲ್ಲಾಡಳಿತದ ಕಾರ್ಯವೈಖರಿಯ ವಿರುದ್ಧ ಕಿಡಿ ಕಾರಿದರು.
PublicNext
17/01/2025 03:38 pm