ಚಳ್ಳಕೆರೆ: ಚಲಿಸುತ್ತಿದ್ದ ಕಾರೊಂದು ಪಲ್ಟಿ ಹೊಡೆದು ಮರಕ್ಕೆ ಡಿಕ್ಕಿಯಾದ ಪರಿಣಾಮ ಮೂವರಿಗೆ ಗಂಭೀರ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಳ್ಳಕೆರೆ ನಗರದ ಹೊರವಲಯದ ಪಾವಗಡ ರಸ್ತೆಯ ಎಸ್ ಆರ್ ಡಾಬಾ ಮುಂಭಾಗದ ಮುಖ್ಯರಸ್ತೆಯಲ್ಲಿ ಅಪಘಾತ ಸಂಭವಿಸಿದೆ.
ಇಂದು ಬೆಳಗಿನ ಜಾವ ನಾಲ್ಕರ ಸಮಯದಲ್ಲಿ ಚಳ್ಳಕೆರೆ ಕಡೆಯಿಂದ ಪಾವಗಡ ಕಡೆಗೆ ತೆರಳುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡ ಕಾರಣ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕ ಇದ್ದ ಬೇವಿನ ಮರಕ್ಕೆ ಡಿಕ್ಕಿ ಹೊಡೆದಿದೆ.
ಕಾರಿನಲ್ಲಿದ್ದ ಪವನ್, ಶಿವಾನಿ, ಕೀರ್ತನಾ ಅವರಿಗೆ ಗಂಭೀರ ಗಾಯಗಳಾಗಿದ್ದು, ಚಳ್ಳಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
PublicNext
17/01/2025 04:02 pm