", "articleSection": "Politics,Government", "image": { "@type": "ImageObject", "url": "https://prod.cdn.publicnext.com/s3fs-public/38633520250117042007filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Suresh Gadag" }, "editor": { "@type": "Person", "name": "9113093241" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಗದಗ : ಉತ್ಪನ್ನಗಳಿಗೆ ಮಾರುಕಟ್ಟೆ ದೊರಕಿಸಿ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಉದ್ದೇಶದಿಂದ ಮಾಸಿಕ ಸಂತೆಯನ್ನು ಆರಂಭಿಸಲು ಸರ್ಕಾರ ಸೂ...Read more" } ", "keywords": "Gadag, Monthly Market, Women Empowerment, MLA GS Patil, Karnataka Government, Rural Development, Women Self-Help Groups, Entrepreneurship, Economic Independence.,Politics,Government", "url": "https://publicnext.com/node" }
ಗದಗ : ಉತ್ಪನ್ನಗಳಿಗೆ ಮಾರುಕಟ್ಟೆ ದೊರಕಿಸಿ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಉದ್ದೇಶದಿಂದ ಮಾಸಿಕ ಸಂತೆಯನ್ನು ಆರಂಭಿಸಲು ಸರ್ಕಾರ ಸೂಚಿಸಿದೆ. ಅದರಂತೆ ಜಿಲ್ಲೆಯಲ್ಲಿ ಮೊದಲ ಬಾರಿಗೆ ರೋಣ ಪಟ್ಟಣದಲ್ಲಿ ಈ ಸಂತೆ ಆರಂಭಿಸಲಾಗಿದೆ. ಇತಂಹ ಮಾಸಿಕ ಸಂತೆಯು ಮಹಿಳೆಯರ ಪಾಲಿಗೆ ದಾರಿದೀಪವಾಗುತ್ತವೆ ಎಂದು ಶಾಸಕ ಜಿ.ಎಸ್.ಪಾಟೀಲ ಹೇಳಿದರು.
ಪಟ್ಟಣದಲ್ಲಿ ಗ್ರಾಮೀಣ ಭಾಗದ ಸ್ವಸಹಾಯ ಸಂಘಗಳಲ್ಲಿ ತೊಡಗಿಕೊಂಡಿರುವ ಮಹಿಳೆಯರು ತಯಾರಿಸಿರುವ ಉತ್ಪನ್ನಗಳನ್ನು ಮಾರಾಟ ಮಾಡಲು ವೇದಿಕೆ ಕಲ್ಪಿಸಿ, ಅವರು ಆರ್ಥಿಕವಾಗಿ ಅಭಿವೃದ್ಧಿ ಪಡಿಸಲು ಉತ್ತೇಜನ ನೀಡುವುದಕ್ಕಾಗಿ ತಾಲೂಕ ಪಂಚಾಯಿತಿಯು ‘ಮಾಸಿಕ ಸಂತೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ರೋಣ ಪಟ್ಟಣದಲ್ಲಿ ಈ ಸಂತೆ ಆರಂಭಿಸಲಾಗಿದೆ. ಪ್ರತಿ ಗ್ರಾಮದಲ್ಲೂ ಸಹ ಇಂತಹ ಮಾಸಿಕ ಸಂತೆಯನ್ನು ಮಾಡಲು ನಮ್ಮ ಇಓ ಅವರಿಗೆ ಸೂಚನೆ ನೀಡಿದ್ದೇನೆ ಇದರಿಂದ ಮಹಿಳಾ ಸಂಘಗಳು ಹಾಗೂ ಮಹಿಳೆಯರು ಆರ್ಥಿಕವಾಗಿ ಸಬಲರಾಗುತ್ತಾರೆ.ಇಂದಿನ ಸಂತೆಯಲ್ಲಿ ಕೆಲವು ಸಂಘಗಳು ಭಾಗವಹಿಸಿವೆ. ಮುಂದಿನ ದಿನಗಳಲ್ಲಿ ಗ್ರಾಮ ಮಟ್ಟದಲ್ಲೂ ಈ ತರಹದ ಸಂತೆ ಆರಂಭಿಸಲಾಗುವುದು ಎಂದರು
ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆ (ಎನ್‌ಆರ್‌ಎಲ್‌ಎಂ) ಸಂಜೀವಿನಿ ಯೋಜನೆಯಡಿ ಆರ್ಥಿಕ ನೆರವು ಪಡೆದಿರುವ ಮಹಿಳಾ ಸ್ವಸಹಾಯ ಗುಂಪುಗಳು ತಯಾರಿಸಿರುವ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟಕ್ಕಾಗಿ ಈ ಸಂತೆಯನ್ನು ಆಯೋಜಿಸಲಾಗುತ್ತಿದೆ. ಮೊದಲ ಮಾಸಿಕ ಸಂತೆಯನ್ನು ಪಟ್ಟಣದ ಸಂತೆಯಲ್ಲಿ ಗುರುವಾರ ನಡೆಸಲಾಯಿತು. ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ 13 ಮಹಿಳಾ ಸ್ವಸಹಾಯ ಸಂಘಗಳ ಸದಸ್ಯೆಯರು ತಾವು ತಯಾರಿಸಿದ ಉತ್ಪನ್ನಗಳನ್ನು ಪ್ರದರ್ಶನ ಹಾಗೂ ಮಾರಾಟಕ್ಕೆ ಇಟ್ಟಿದ್ದರು. ಆಹಾರ ಉತ್ಪನ್ನಗಳು, ಕರಕುಶಲ ವಸ್ತುಗಳು ಲಭ್ಯವಿದ್ದವು..
ಜಿಲ್ಲಾ ಪಂಚಾಯತ ಯೋಜನಾ ನಿರ್ಧಶಕ ಎಮ್. ವಿ. ಚಳಗೇರಿ ಮಾತನಾಡಿ ಸಂಜೀವಿನಿ ಸಂಘದ ಉತ್ಪನ್ನವು ಮಾರುಕಟ್ಟೆಯಲ್ಲಿ ಗುರುತಿಸಿಕೊಳ್ಳುವಂತೆ ಮಾಡಲು ಅದರಲ್ಲಿ ವಿಭಿನ್ನತೆಯಿರಬೇಕು, ಉತ್ಪನ್ನದ ಗುಣಮಟ್ಟ ಮತ್ತು ಅದನ್ನು ಗ್ರಾಹಕರಿಗೆ ನೀಡುವಾಗ ಉತ್ತಮ ಪ್ಯಾಕೆಜಿಂಗ್ ಹೊಂದಿರಬೇಕು. ಆಗ ಮಾತ್ರ ಉತ್ಪನ್ನಗಳು ಜನರನ್ನು ತಲುಪುತ್ತವೆ, ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕ ಬೆಲೆಯನ್ನು ನಿಗದಿಪಡಿಸಿದಾಗ ಮಾತ್ರ ಹೆಚ್ಚಿನ ವಸ್ತುಗಳು ಮಾರಾಟವಾಗುತ್ತವೆ ಈ ನಿಟ್ಟಿನಲ್ಲಿ ನೀವು ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.
ತಾಲೂಕ ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ ಕಂದಕೂರ ಮಾತನಾಡಿ ಜಿ.ಪಂ ಸಿಇಓ ಅವರ ಮಾರ್ಗದರ್ಶನದಲ್ಲಿ ಇಂತಹ ಒಂದು ಪರಿಕಲ್ಪನೆ ಮಾಡಲಾಗಿದ್ದು ಈ ಕಾರ್ಯಕ್ರಮವನ್ನು ಮಾನ್ಯ ಶಾಸಕರ ಅಧ್ಯಕ್ಷತೆಯಲ್ಲಿ ಮಾಡಲಾಗಿದೆ. ಮಾಸಿಕ ಸಂತೆಗಳಲ್ಲಿ ಹೆಚ್ಚಿನ ಸಂಘಗಳು ಪಾಲ್ಗೊಳ್ಳಬೇಕು. ಗುಣಮಟ್ಟದ ಹಾಗೂ ಪರಿಶುದ್ಧವಾದ ಉತ್ಪನ್ನ ತಯಾರಿಸಬೇಕು. ಉತ್ಪನ್ನಗಳ ಬಗ್ಗೆ ಪ್ರಚಾರವನ್ನು ಮಾಡಬೇಕು’ ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷೆ ಗೀತಾ ಮಾಡಲಗೇರಿ,ಉಪಾಧ್ಯಕ್ಷ ದುರಗಪ್ಪ ಹಿರೇಮನಿ ತಾಲೂಕ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಉಮಾ ಮಂತೂರ, ತಾಲೂಕಿನ ಎಲ್ಲಾ ಸ್ವ ಸಹಾಯ ಸಂಘದ ಸದಸ್ಯರು ಹಾಗೂ ಸಂಜೀವಿನಿ ಸಿಬ್ಬಂದಿಗಳು ಸೇರಿದಂತೆ ಪಟ್ಟಣದ ಜನರು ಹಾಜರಿದ್ದರು.
Kshetra Samachara
17/01/2025 04:20 pm