", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/421698-1737111525-V4~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "HarishKarkala" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಜಾರಿಗೆಕಟ್ಟೆ ಚರ್ಚಿನ ಬಳಿ...Read more" } ", "keywords": "Karkala, car accident, driver lost control, passengers injured, serious injuries, road accident, Karnataka news, Udupi district, car mishap.,Udupi,Mangalore,Accident", "url": "https://publicnext.com/node" }
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಜಾರಿಗೆಕಟ್ಟೆ ಚರ್ಚಿನ ಬಳಿ ರಾಜ್ಯ ಹೆದ್ದಾರಿಯಲ್ಲಿ ಇಂದು ಮುಂಜಾನೆ 5 ಗಂಟೆಗೆ ಸಂಭವಿಸಿದೆ. ಶಿವಮೊಗ್ಗದಿಂದ ಮಂಗಳೂರು ಕಡೆ ಚಲಿಸುತ್ತಿದ್ದ KA12MC0180 ನಂಬರಿನ ಟೊಯೊಟಾ ಅರ್ಬನ್ ಕ್ರೂಷಿಯರ್ ಹೈರೈಡರ್ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಅಪ್ಪಳಿಸಿ ಪಲ್ಟಿಯಾಗಿದೆ. ಕಾರಿನಲ್ಲಿ ಮೂರು ಜನ ಪ್ರಯಾಣಿಸುತ್ತಿದ್ದು, ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಈ ವೇಳೆ ಅದೇ ದಾರಿಯಲ್ಲಿ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆ ಹೋಗುತ್ತಿದ್ದ ಯಾತ್ರಾರ್ಥಿಗಳು ಕೂಡಲೇ ಸಮಾಜಸೇವಕ ಸುಪ್ರೀತ್ ಶೆಟ್ಟಿಯವರಿಗೆ ಕರೆ ಮಾಡಿದ್ದು, ತಕ್ಷಣ ಆಗಮಿಸಿದ ಅವರು ತನ್ನ ಅಂಬ್ಯುಲೆನ್ಸ್‌ನಲ್ಲಿ ಗಾಯಾಳುಗಳನ್ನು ಸಾಗಿಸಿ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಿದ್ದಾರೆ. ಅಪಘಾತ ನಡೆದ ದೃಶ್ಯಾವಳಿ ಪಕ್ಕದ ಚರ್ಚ್‌ನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
PublicNext
17/01/2025 04:28 pm