", "articleSection": "Politics,Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/286525-1737119386-WhatsApp-Image-2025-01-17-at-6.37.50-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Vishwanath" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮಂಗಳೂರು: ಸಿಎಂ ಸಿದ್ದರಾಮಯ್ಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ದ.ಕ. ಜಿಲ್ಲಾ ಪ್ರವಾಸದಲ್ಲಿದ್ದಾರೆ. ಮಧ್ಯಾಹ್ನ ವೇಳೆಗೆ ಅವರು ಎಂಎಲ್‌ಸಿ ಐ...Read more" } ", "keywords": "Mangalore Bank Robbery, MLA Ivan D'Souza, Chief Minister Emergency Meeting, Police Investigation, Karnataka Crime News, Dakshina Kannada Bank Heist, Mangalore City Police, Bank Security Measures.,Udupi,Mangalore,Politics,Crime,Law-and-Order", "url": "https://publicnext.com/node" } ಮಂಗಳೂರು: ಬ್ಯಾಂಕ್ ದರೋಡೆ ಪ್ರಕರಣ- ಎಂಎಲ್‌ಸಿ ಐವನ್ ಮನೆಯಲ್ಲಿ ಸಿಎಂ ತುರ್ತು ಸಭೆ, ಪೊಲೀಸರಿಗೆ ಕ್ಲಾಸ್
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಬ್ಯಾಂಕ್ ದರೋಡೆ ಪ್ರಕರಣ- ಎಂಎಲ್‌ಸಿ ಐವನ್ ಮನೆಯಲ್ಲಿ ಸಿಎಂ ತುರ್ತು ಸಭೆ, ಪೊಲೀಸರಿಗೆ ಕ್ಲಾಸ್

ಮಂಗಳೂರು: ಸಿಎಂ ಸಿದ್ದರಾಮಯ್ಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ದ.ಕ. ಜಿಲ್ಲಾ ಪ್ರವಾಸದಲ್ಲಿದ್ದಾರೆ. ಮಧ್ಯಾಹ್ನ ವೇಳೆಗೆ ಅವರು ಎಂಎಲ್‌ಸಿ ಐವನ್ ಡಿಸೋಜ ಮನೆಗೆ ಊಟಕ್ಕೆ ತೆರಳಿದ್ದರು.

ಈ ವೇಳೆ ನಗರದ ತೊಕ್ಕೊಟ್ಟು ಬಳಿಯ ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘ ಬ್ಯಾಂಕ್‌ನಲ್ಲಿ ಇಂದು ಹಾಡಹಗಲೇ ನಡೆದ ಬ್ಯಾಂಕ್ ದರೋಡೆ ಪ್ರಕರಣ ಬಗ್ಗೆ ಐವನ್ ಡಿಸೋಜ ಅವರ ಮನೆಯಲ್ಲಿಯೇ ಪೊಲೀಸರೊಂದಿಗೆ ತುರ್ತು ಸಭೆ ನಡೆಸಿದ್ದಾರೆ. ಪಶ್ಚಿಮ ರೇಂಜ್‌ನ ಐಜಿ ಅಮಿತ್ ಸಿಂಗ್, ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್, ಎಸ್‌ಪಿ ಯತೀಶ್, ಡಿವೈಎಸ್‌ಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಘಟನೆಯ ಕುರಿತಂತೆ ಸಮಗ್ರ ಮಾಹಿತಿ ಪಡೆದ ಸಿಎಂ, ನೀವೆಲ್ಲಾ ಇದ್ದು ಯಾಕೆ ಹೀಗಾಯ್ತು? ಆರೋಪಿಗಳು ಸಲೀಸಾಗಿ ತಪ್ಪಿಸಿಕೊಂಡು ಹೋಗಿದ್ದು ಹೇಗೆ ? ಎಷ್ಟು ಟೋಲ್‌ಗಳನ್ನು ದಾಟಿ ಹೋಗಿದ್ದಾರೆ. ನೀವು ಟೋಲ್‌ಗಳನ್ನು‌ ಏಕೆ ಟೈಟ್ ಮಾಡಲಿಲ್ಲ ಎಂದು ಗರಂ ಆಗಿ ಪ್ರಶ್ನಿಸಿದರು.

ಸಹಕಾರಿ ಬ್ಯಾಂಕ್‌ನಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ. ಐದಾರು ಮಂದಿ ಮಾತ್ರ ಬ್ಯಾಂಕ್ ಸಿಬ್ಬಂದಿ ಇದ್ದರು. ಆರೋಪಿಗಳು ಕನ್ನಡ ಮತ್ತು ಹಿಂದಿಯಲ್ಲಿ ಮಾತಾಡಿರುವುದು ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.‌

ಎಲ್ಲಾ ಟೋಲ್‌ಗಳಲ್ಲೂ ಬಿಗಿ ತಪಾಸಣೆ ನಡೆಸಬೇಕು. ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ನಾಕಾಬಂಧಿ ಹಾಕಿ, ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮಕ್ಕೆ ಒಪ್ಪಿಸಿ ಎಂದು ಮುಖ್ಯಮಂತ್ರಿಗಳು ತಾಕೀತು ಮಾಡಿದರು.

ಈ ಸಂದರ್ಭ ಸಾರ್ವಜನಿಕರು ಅನೇಕ ಸಮಸ್ಯೆಗಳ ಬಗ್ಗೆ ಮನವಿಯನ್ನು ಸಿಎಂಗೆ ನೀಡಿದರು. ಅಲ್ಲದೆ, ಮನಪಾ ವ್ಯಾಪ್ತಿಯಲ್ಲಿ ಶೇ.50ರಷ್ಟು ಭಾಗಗಳಿಗೆ ಕಲುಷಿತ ನೀರು ಪೂರೈಕೆ ಬಗ್ಗೆ ಮಂಗಳೂರು ಮನಪಾ ವಿಪಕ್ಷದಿಂದ ನಡೆಸಿರುವ ಸತ್ಯಶೋಧನಾ ಸಮಿತಿಯ ವರದಿಯನ್ನು ಎಂಎಲ್‌ಸಿ ಐವನ್ ಡಿಸೋಜ ಅವರು ಸಿಎಂಗೆ ನೀಡಿದರು.

Edited By : Shivu K
PublicNext

PublicNext

17/01/2025 06:39 pm

Cinque Terre

21.28 K

Cinque Terre

0

ಸಂಬಂಧಿತ ಸುದ್ದಿ