ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಡಿಕೇರಿ : ಹಸುಗಳ ಕೆಚ್ಚಲು ಕೊಯ್ದ ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಆಗ್ರಹ

ಮಡಿಕೇರಿ : ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲನ್ನು ಕತ್ತರಿಸಿ ಅಮಾನವೀಯ ಕೃತ್ಯವೆಸಗಿರುವುದನ್ನು ಖಂಡಿಸಿ, ದುಷ್ಕೃತ್ಯವೆಸಗಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಗೋ ಸಂರಕ್ಷಣಾ ಸಂವರ್ಧನಾ ಸಮಿತಿಯ ನೇತೃತ್ವದಲ್ಲಿ ವಿವಿಧ ಹಿಂದೂ ಪರ ಸಂಘಟನೆಗಳು ಮಡಿಕೇರಿಯಲ್ಲ್ಲಿ ಮಾನವ ಸರಪಳಿ ರಚಿಸಿ ಬೃಹತ್ ಪ್ರತಿಭಟನೆ ನಡೆಸಿದವು.

ನಗರದ ಜನರಲ್ ಕೆ.ಎಸ್. ತಿಮ್ಮಯ್ಯ ವೃತ್ತದಲ್ಲಿ ಬೆಳಗ್ಗೆ ಸಮಾವೇಶಗೊಂಡ ವಿವಿಧ ಹಿಂದೂ ಪರ ಸಂಘಂಟನೆಗಳ ಪ್ರಮುಖರು ಮತ್ತು ಕಾರ್ಯಕರ್ತರು, ಹಿಂದೂ ಸಮಾಜಕ್ಕೆ ಪೂಜನೀಯವಾಗಿರುವ ಹಸುಗಳ ಮೇಲೆ ಕುಕೃತ್ಯವೆಸಗಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲವೆಂದು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

Edited By : PublicNext Desk
PublicNext

PublicNext

17/01/2025 07:04 pm

Cinque Terre

22.67 K

Cinque Terre

0

ಸಂಬಂಧಿತ ಸುದ್ದಿ