ಹೊಸದುರ್ಗ : ಶಾಸಕ ಗೊವಿಂದಪ್ಪನವರು ಸ್ವತಃ ಕೃಷಿಕರಾಗಿದ್ದು, ಸಿರಿಧಾನ್ಯ ಬೆಳೆಯುವುದರೊಂದಿಗೆ ಆಹಾರದಲ್ಲಿಯೂ ಸಿರಿಧಾನ್ಯ ಬಳಸುತ್ತಿದ್ದಾರೆ. ಈ ಮೂಲಕ ತಾಲ್ಲೂಕಿನ ರೈತರಿಗೆ ಮಾದರಿಯಾಗಿದ್ದಾರೆ. ಹೊಸದುರ್ಗದ ಮಾದರಿಯಲ್ಲಿ ಮಳೆ ಕಡಿಮೆ ಬೀಳುವ ರಾಜ್ಯದ ಇತರೆ ಜಾಗದಲ್ಲಿ ಸಿರಿಧಾನ್ಯ ಬೆಳೆಯಲು ರೈತರಿಗೆ ಸರ್ಕಾರದಿಂದ ಪ್ರೋತ್ಸಾಹ ನೀಡಲಾಗುವುದು. ಅಂತರಾಷ್ಟ್ರೀಯ ಮೇಳದಲ್ಲಿ ಮುಖ್ಯಮಂತ್ರಿಗಳಿಂದ ಶಾಸಕ ಬಿ.ಜಿ.ಗೋವಿಂದಪ್ಪ ಅವರಿಗೆ ಸನ್ಮಾನಿಸಲಾಗುವುದು ಎಂದರು.
ಮಹೇಶ್ ಹಾಗೂ ಪ್ರಭುಲಿಂಗಪ್ಪ ನವರ ಸಿರಿಧಾನ್ಯ ರೈತರ ಒಕ್ಕಲು ಕಣ ಹಾಗೂ ಕ್ಷೇತ್ರಕ್ಕೆ ಭೇಟಿ ನೀಡಿದ್ದೇನೆ. ರೈತ ಮಹೇಶ್ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ರೂ.12 ಸಾವಿರಕ್ಕೆ ದುಡಿಯುತ್ತಿದ್ದರು. ಖರ್ಚು ಕಳೆದು ತಿಂಗಳಿಗೆ ರೂ.4 ಸಾವಿವರ ಮಾತ್ರ ಉಳಿಯುತ್ತಿತ್ತು. ಈಗ ಮರಳಿ ಸಮಗ್ರ ಕೃಷಿ ಪದ್ದತಿಯಲ್ಲಿ ವಾರ್ಷಿಕವಾಗಿ ಎಲ್ಲಾ ಖರ್ಚು ಕಳೆದು ರೂ.4 ಲಕ್ಷ ಲಾಭ ಗಳಿಸುತ್ತಿದ್ದಾರೆ. ರೇಷ್ಮೆ, ಕೋಳಿ ಸಾಕಾಣಿಕೆ, ಸಿರಿ ಧಾನ್ಯಗಳನ್ನು ಬೆಳದು ರಾಜ್ಯದ ಇತರೆ ಯುವಕರಿಗೂ ಮಾದರಿಯಾಗಿದ್ದಾರೆ. ಇನ್ನೊರ್ವ ರೈತ ಪ್ರಭುಲಿಂಗಸ್ವಾಮಿ ಸಹ ಸಮಗ್ರ ಕೃಷಿ ಮಾಡುತ್ತಿದ್ದು, ಯಾವುದೇ ಸಾಲ ಹಾಗೂ ಬಡ್ಡಿಯ ಜಂಜಾಟವಿಲ್ಲದೇ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಕೃಷಿ ಇಲಾಖೆ, ಕೃಷಿ ವಿಶ್ವ ವಿದ್ಯಾಲಯಗಳು ನೀಡುವ ಸಲಹೆಗಳನ್ನು ರೈತರು ಕೃಷಿಯಲ್ಲಿ ಅಳವಡಿಸಿಕೊಂಡರೆ ಜೀವನ ಸುಧಾರಿಸುವುದು ಎಂದು ಸಚಿವ ಚಲುವರಾಯಸ್ವಾಮಿ ಅಭಿಪ್ರಾಯ ಪಟ್ಟರು.
Kshetra Samachara
17/01/2025 07:26 pm