ಕುಂದಾಪುರ: ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ. ಪಿ. ಗಡಾದ್ ಅವರನ್ನು ಬೆಳಗಾವಿ ಜಿಲ್ಲೆಯಲ್ಲಿ ಖಾಲಿ ಇರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.
ಮುಖ್ಯಮಂತ್ರಿಯವರಿಂದ ಅನುಮೋದಿತಗೊಂಡಿರುವ ವರ್ಗಾವಣೆ ಆದೇಶದಲ್ಲಿ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಎಂದು ನಮೂದಿಸಲಾಗಿದ್ದು, ವರ್ಗಾವಣೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.
Kshetra Samachara
17/01/2025 09:23 pm