", "articleSection": "Politics,Infrastructure", "image": { "@type": "ImageObject", "url": "https://prod.cdn.publicnext.com/s3fs-public/286525-1737130237-WhatsApp-Image-2025-01-17-at-9.39.57-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Praveen Onkari" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಧಾರವಾಡ: ಹತ್ತು ಹದಿನೈದು ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ನಾಲ್ಕೈದು ದ...Read more" } ", "keywords": "Here are the SEO English keywords in comma-separated format: Dharwad News, Drinking Water Crisis, Village Protest, Panchayat Office, Karnataka Rural Development, Water Scarcity, Gram Panchayat, Dharwad District News.,Hubballi-Dharwad,Politics,Infrastructure", "url": "https://publicnext.com/node" }
ಧಾರವಾಡ: ಹತ್ತು ಹದಿನೈದು ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ನಾಲ್ಕೈದು ದಿನಕ್ಕೊಮ್ಮೆಯಾದರೂ ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದು ಆಗ್ರಹಿಸಿ ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ಏಳನೇ ವಾರ್ಡ್‌ನ ಸಾರ್ವಜನಿಕರು ಗ್ರಾಮ ಪಂಚಾಯ್ತಿ ಎದುರು ಧರಣಿ ನಡೆಸಿದರು.
ಗ್ರಾಮ ಪಂಚಾಯ್ತಿ ಎದುರು ಮಹಾತ್ಮಾ ಗಾಂಧೀಜಿ ಹಾಗೂ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಫೋಟೋಗಳನ್ನಿಟ್ಟು ಸಾರ್ವಜನಿಕರು ಧರಣಿ ನಡೆಸುವುದರ ಜೊತೆಗೆ ಗ್ರಾಮ ಪಂಚಾಯ್ತಿ ವಿರುದ್ಧ ಧಿಕ್ಕಾರ ಕೂಗಿದರು.
ಹೆಬ್ಬಳ್ಳಿಯ ಕೆಲ ವಾರ್ಡ್‌ಗಳಲ್ಲಿ ನಾಲ್ಕೈದು ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಕೆಯಾಗುತ್ತವೆ. ಗ್ರಾಮ ಪಂಚಾಯ್ತಿಯಲ್ಲಿ ಯಾರು ಪ್ರಭಾವಿಗಳಿದ್ದಾರೋ ಅವರು ತಮ್ಮ ವಾರ್ಡ್‌ಗಳಿಗೆ ಸರಿಯಾದ ಸಮಯದಲ್ಲಿ ಕುಡಿಯುವ ನೀರು ಪೂರೈಕೆ ಮಾಡಿಸಿಕೊಳ್ಳುತ್ತಾರೆ. ಆದರೆ, ಏಳನೇ ವಾರ್ಡ್‌ಗೆ ಮಾತ್ರ ಹದಿನೈದು ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಕೆಯಾಗುತ್ತಿವೆ. 15 ದಿನದವರೆಗೂ ಜನ ಅದೇ ನೀರನ್ನು ಶೇಖರಿಸಿ ಇಟ್ಟುಕೊಂಡು ಕುಡಿಯುವ ಪರಿಸ್ಥಿತಿ ಎದುರಾಗಿದೆ. ಕೆಲವೊಂದು ಬಾರಿ ಆ ನೀರಿನಲ್ಲಿ ಹುಳುಗಳು ಸಹ ಆಗುತ್ತಿವೆ. ಕೂಡಲೇ ಏಳನೇ ವಾರ್ಡ್‌ಗೂ ನಾಲ್ಕೈದು ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಕೆ ಮಾಡಲು ಕ್ರಮ ವಹಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದರು.
Kshetra Samachara
17/01/2025 09:41 pm