", "articleSection": "Crime", "image": { "@type": "ImageObject", "url": "https://prod.cdn.publicnext.com/s3fs-public/43595620250117101347filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Punith Mulki" }, "editor": { "@type": "Person", "name": "9448337190" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಉಪ್ಪಿನಂಗಡಿ: ಆಟೊ ರಿಕ್ಷಾದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಗುರುವಾರ ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ....Read more" } ", "keywords": "Node,Mangalore,Crime,Udupi", "url": "https://publicnext.com/node" }
ಉಪ್ಪಿನಂಗಡಿ: ಆಟೊ ರಿಕ್ಷಾದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಗುರುವಾರ ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ನಿವಾಸಿ ಅಬ್ದುಲ್ ಸಲೀಂ (35) ಬಂಧಿತ ಆರೋಪಿ. ಈತನನಿಂದ 1.5 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಉಪ್ಪಿನಂಗಡಿ ಎಸ್ಸೆ ಅವಿನಾಶ್ ಎಚ್. ಮತ್ತವರ ತಂಡ 34ನೇ ನೆಕ್ಕಿಲಾಡಿ ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿದ್ದಾಗ ಬಂಟ್ವಾಳ ಕಡೆಯಿಂದ ಉಪ್ಪಿನಂಗಡಿಯತ್ತ ಸಂಚರಿಸುತ್ತಿದ್ದ ಆಟೊ ರಿಕ್ಷಾವನ್ನು ನಿಲ್ಲಿಸಲು ಸೂಚಿಸಿದ್ದರು. ಈ ವೇಳೆ ರಿಕ್ಷಾವನ್ನು ನಿಲ್ಲಿಸದೆ ಮುಂದಕ್ಕೆ ಚಲಾಯಿಸಿ ಚಾಲಕ ರಿಕ್ಷಾದಿಂದ ಇಳಿದು ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಆತನನ್ನು ಹಿಡಿದು ವಿಚಾರಣೆಗೊಳಪಡಿಸಿದಾಗ ತಾನು ಗಾಂಜಾ ಸಾಗಿಸುತ್ತಿರುವುದಾಗಿ ತಿಳಿಸಿದ್ದಾನೆ.
ಗಾಂಜಾವನ್ನು ನೌಶಾದ್ ಎಂಬಾತ ತನಗೆ ಮಾರಾಟ ಮಾಡಲು ನೀಡಿರುವುದಾಗಿ ತಿಳಿಸಿದ್ದು, ಆರೋಪಿಯನ್ನು ಸಾಗಾಟಕ್ಕೆ ಬಳಸಿದ್ದ ' ಆಟೊ ರಿಕ್ಷಾ ಸಹಿತ ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ. ನಿವೃತ್ತ ನಿರೀಕ್ಷಕ ರವಿ ಬಿ.ಎಸ್. ಅವರ ಮಾರ್ಗದರ್ಶನದಂತೆ ನಡೆದ ಕಾರ್ಯಾಚರಣೆಯಲ್ಲಿ ಸಿಬ್ಬಂದಿ ನಾಗರಾಜ, ಮಹದೇವ, ವಡಗೇರಿ ಕಿರಣ, ರಾಮನಗೌಡ, ಲಾಲು ಪ್ರಸಾದ್ ಭಾಗವಹಿಸಿದ್ದಾರೆ.
Kshetra Samachara
17/01/2025 10:13 pm