ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಎಷ್ಟಾದರೂ ಹಣ-ಸವಲತ್ತು ಕೇಳಿ ಕೊಡುತ್ತೇವೆ, ಆದರೆ ಒಲಂಪಿಕ್ ಮೆಡಲ್ ತನ್ನಿ - ಕ್ರೀಡಾಪುಟಗಳಿಗೆ ಸಿಎಂ ಕರೆ

ಮಂಗಳೂರು: ಕ್ರೀಡಾಪಟುಗಳು, ಕೋಚ್‌ಗಳು ಮತ್ತು ಕ್ರೀಡಾ ಇಲಾಖೆ ಎಷ್ಟಾದರೂ ಹಣ ಸವಲತ್ತು ಕೇಳಿ ಕೊಡುತ್ತೇನೆ. ಆದರೆ ಒಲಂಪಿಕ್‌ನಲ್ಲಿ ರಾಜ್ಯದ ಕ್ರೀಡಾಪಟುಗಳು ದೇಶಕ್ಕಾಗಿ ಮೆಡಲ್ ತನ್ನಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.‌

ಯುವಜನ ಮತ್ತು ಕ್ರೀಡಾ ಇಲಾಖೆ ಮತ್ತು ಜಿಲ್ಲಾಡಳಿತ ಸಂಯುಕ್ತಾಶ್ರಯದಲ್ಲಿ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ "ಕರ್ನಾಟಕ ಕ್ರೀಡಾಕೂಟ 2025 ಅನ್ನು ಉದ್ಘಾಟಿಸಿ ಮಾತನಾಡಿ, ಅಗತ್ಯ ವೇದಿಕೆ ಮತ್ತು ಉತ್ತಮ ಪ್ರೋತ್ಸಾಹ ಇಲ್ಲದಿದ್ದರೆ ಕ್ರೀಡಾ ಕ್ಷೇತ್ರ ಮತ್ತು ಕ್ರೀಡಾಪಟುಗಳು ಬೆಳವಣಿಗೆ ಆಗಲು ಸಾಧ್ಯವಿಲ್ಲ. ಆದ್ದರಿಂದ ನಮ್ಮ ಸರ್ಕಾರ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಹಾಜರಾತಿ ಸೇರಿ ಇನ್ನಿತರೆ ರಿಯಾಯಿತಿಗಳನ್ನು ಕೊಡುವ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಹೇಳಿದರು.

ಮುಂದಿನ ಬಜೆಟ್‌ನಲ್ಲಿ ಮಂಗಳೂರು ಮತ್ತು ಉಡುಪಿ ಕ್ರೀಡಾಂಗಣಗಳ ಉನ್ನತೀಕರಣಕ್ಕೆ ತಲಾ 3 ಕೋಟಿ ರೂಪಾಯಿ ನಿಗದಿ ಮಾಡುತ್ತೇನೆ. ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವಾಗ ಶೇಕಡಾ 2ರಷ್ಟು ಉದ್ಯೋಗಗಳು ಕ್ರೀಡಾಟುಗಳಿಗೆ ಮೀಸಲು ಇಡಲಾಗುವುದು. ಜೊತೆಗೆ ಪೊಲೀಸ್, ಅರಣ್ಯ ಇಲಾಖೆ ಸೇರಿ ಸಮವಸ್ತ್ರ ಧರಿಸುವ ಹುದ್ದೆಗಳಿಗೆ ಶೇಕಡಾ 3ರಷ್ಟು ಉದ್ಯೋಗ ಕ್ರೀಡಾಪಟುಗಳಿಗೆ ಉದ್ಯೋಗ ಮೀಸಲು ಇಡಲಾಗುವುದು ಎಂದು ಸಿಎಂ ಘೋಷಿಸಿದರು.

ಒಲಂಪಿಕ್‌ನಲ್ಲಿ ಮೆಡಲ್ ತಂದವರಿಗೆ 6 ಕೋಟಿ ರೂಪಾಯಿ ಕೊಡುತ್ತೇವೆ. ಹಾಗೆಯೇ ಏಷ್ಯಾ ಕ್ರೀಡಾಕೂಟ ಮತ್ತು ಕಾಮನ್‌ವೆಲ್ತ್ ಗೇಮ್‌ನಲ್ಲಿ ಪದಕ ತಂದವರಿಗೂ 50 ಲಕ್ಷ ರೂಪಾಯಿ ನಗದು ಬಹುಮಾನ ಕೊಡುತ್ತಿದ್ದೇವೆ. ಈ ಪ್ರೋತ್ಸಾಹ ಸದುಪಯೋಗಪಡಿಸಿಕೊಂಡು ಮೆಡಲ್‌ಗಳನ್ನು ತಂದು ಕ್ರೀಡಾಕ್ಷೇತ್ರವನ್ನು ಬೆಳಗಿಸಿ, ಬೆಳೆಸಿ ಎಂದು ಕರೆ ನೀಡಿದರು.

Edited By : Shivu K
PublicNext

PublicNext

17/01/2025 10:40 pm

Cinque Terre

6.6 K

Cinque Terre

0

ಸಂಬಂಧಿತ ಸುದ್ದಿ