ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದತ್ತಾ ಪಠ Vs ಬಾಬಾಬುಡನ್ ಗಿರಿ ವಿವಾದ : ಶಾಶ್ವತ ಪರಿಹಾರಕ್ಕೆ ಚಿಂತನೆ - ಪರಮೇಶ್ವರ್

ಬೆಂಗಳೂರು: ಪೂಜಾ ಪದ್ಧತಿ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಸೂಚನೆ ಬೆನ್ನಲ್ಲೇ ದತ್ತಪೀಠ ಹಾಗೂ ಬಾಬಾ ಬುಡನ್‌ಗಿರಿ ಆಚರಣೆ ಮಾಡುವವರ ಜೊತೆ ಗೃಹ ಸಚಿವ ಪರಮೇಶ್ವರ್ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಭೆ ನಡೆಸಿದರು‌. ಸಭೆಯಲ್ಲಿ ಸಚಿವರಾದ ಜಮೀರ್ ಅಹಮದ್, ಕೃಷ್ಣ ಬೈರೇಗೌಡ, ರಾಮಲಿಂಗ ರೆಡ್ಡಿ, ಸಿಟಿ ರವಿ, ಪ್ರಾಣೇಶ್ ಸೇರಿದಂತೆ ಎರಡೂ ಧರ್ಮದ ಮುಖಂಡರು ಮತ್ತು ಚಿಕ್ಕಮಗಳೂರು ಭಾಗದ ಪ್ರಮುಖ ನಾಯಕರು ಭಾಗಿಯಾಗಿದ್ರು.

ಸಭೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳು, ಧಾರ್ಮಿಕ ಮುಖಂಡರು ಹಾಗೂ ವಿವಿಧ ಸಂಘಟನೆಗಳ ಮುಖಂಡರುಗಳ ಸಲಹೆಗಳನ್ನು ಪಡೆದರು. ದಾಖಲೆಗಳು ಶಾಶ್ವತವಾಗಿ ಇರುವಂತಹವು.‌ ಈ ವಿಚಾರದಲ್ಲಿ ಕಾನೂನಿನ ಸಲಹೆ ಪಡೆಯಬೇಕಾಗುತ್ತದೆ. ಕರ್ನಾಟಕಕ್ಕೆ ದೇಶದಲ್ಲಿ ಒಳ್ಳೆಯ ಹೆಸರಿದೆ. ಈ ಸಮಸ್ಯೆಯನ್ನು ಹೆಚ್ಚು ದಿನ ಮುಂದಕ್ಕೆ ತೆಗೆದುಕೊಂಡು ಹೋಗುವುದಿಲ್ಲ. ಶಾಂತಿ ಸಾಮರಸ್ಯ ನೆಲೆಸುವಂತೆ‌ ಮಾಡಬೇಕು. ಈ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಬೇಕು ಎಂದು ಸರ್ಕಾರ ತೀರ್ಮಾನ ಮಾಡಿದೆ ಎಂದು ಸಭೆಯಲ್ಲಿ ಪರಮೇಶ್ವರ್ ತಿಳಿಸಿದರು.

ಮಾರ್ಚ್ 24ರೊಳಗೆ ಸರ್ಕಾರದ ಅಭಿಪ್ರಾಯ ತಿಳಿಸುವಂತೆ ಜನವರಿ 7ರಂದು ಸುಪ್ರಿಂ ಕೋರ್ಟ್ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳು, ಧಾರ್ಮಿಕ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ, ಎಲ್ಲರ ಅಭಿಪ್ರಾಯ ಮತ್ತು ಸಲಹೆಗಳನ್ನು ಪಡೆದುಕೊಳ್ಳಲಾಗಿದೆ. ಮುಂದಿನ ವಾರ ಸಚಿವ ಸಂಪುಟ ಉಪ‌ಸಮಿತಿ ಸಭೆ ಕರೆದು ಜನಪ್ರತಿನಿಧಿಗಳು ಹಾಗೂ ಧಾರ್ಮಿಕ ಮುಖಂಡರು ತಿಳಿಸಿರುವ ಸಲಹೆಗಳನ್ನು ಮತ್ತು ದಾಖಲೆಗಳನ್ನು ಪರಿಶೀಲಿಸಿ ಕೋರ್ಟ್‌ಗೆ ತಿಳಿಸುತ್ತೇವೆ. ಅದಾದ ನಂತರ ಕೋರ್ಟ್‌ನಿಂದ ಬರುವ ತೀರ್ಮಾನದಂತೆ ನಡೆದುಕೊಳ್ಳೋಣ ಎಂದು ಹೇಳಿದರು.

Edited By : Vijay Kumar
PublicNext

PublicNext

17/01/2025 10:59 pm

Cinque Terre

13.78 K

Cinque Terre

0