", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/43595620250118095515filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Punith Mulki" }, "editor": { "@type": "Person", "name": "9448337190" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮಂಗಳೂರು: ನಗರದ ಹೊರವಲಯದ ಕೊಣಾಜೆ ನಡುಪದವು ಬಳಿ ಸಮೀಪ ದ್ವಿಚಕ್ರ ವಾಹನ ಮತ್ತು ಏಸ್ ಟೆಂಪೊ ಮಧ್ಯೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹ...Read more" } ", "keywords": "Mangaluru, Konaaje, bike accident, Tempo traveller accident, college student dies, road accident, Mangalore news, Dakshina Kannada, student death. ,Udupi,Mangalore,Accident", "url": "https://publicnext.com/node" }
ಮಂಗಳೂರು: ನಗರದ ಹೊರವಲಯದ ಕೊಣಾಜೆ ನಡುಪದವು ಬಳಿ ಸಮೀಪ ದ್ವಿಚಕ್ರ ವಾಹನ ಮತ್ತು ಏಸ್ ಟೆಂಪೊ ಮಧ್ಯೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿದ್ದಾರೆ.
ಮೃತರನ್ನು ಕೊಣಾಜೆ ಗ್ರಾಮದ ನಡುಪದವು ಕಾಟುಕೋಡಿ ನಿವಾಸಿ ಅಬೂಬಕರ್ ಸಿದ್ದೀಕ್(22) ಎಂದು ಗುರುತಿಸಲಾಗಿದೆ. ಅಬೂಬಕರ್ ಸಿದ್ದೀಕ್ ಕಾಸರಗೋಡಿನಲ್ಲಿ ಅರಬಿಕ್ ಶರೀಅತ್ ಕಾಲೇಜಿನಲ್ಲಿ ಕಲಿಯುತ್ತಿದ್ದು, ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದರು ಎಂದು ತಿಳಿದುಬಂದಿದೆ.
ದೇರಳಕಟ್ಟೆ ಕಡೆಯಿಂದ ತೆರಳುತ್ತಿದ್ದ ಸ್ಕೂಟರ್ ಮತ್ತು ಮುಡಿಪು ಕಡೆಯಿಂದ ತೊಕ್ಕೊಟ್ಟಿನತ್ತ ಬರುತ್ತಿದ್ದ ಏಸ್ ಟೆಂಪೊ ಮಧ್ಯೆ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಸ್ಕೂಟರ್ ಭಾಗಶಃ ಟೆಂಪೊದೊಳಗೆ ನುಗ್ಗಿದ್ದು, ನಜ್ಜುಗುಜ್ಜಾಗಿದೆ. ಈ ವೇಳೆ ಟೆಂಪೋದ ಮೇಲೆ ಎಸೆಯಲ್ಪಟ್ಟ ಅಬೂಬಕರ್ ಸಿದ್ದೀಕ್ ಗಂಭೀರವಾಗಿ ಗಾಯಗೊಂಡಿದ್ದರು. ಅವರು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಟೆಂಪೋ ಚಾಲಕ ಕೂಡಾ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಕೊಣಾಜೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Kshetra Samachara
18/01/2025 09:55 am