ಮೈಸೂರು: ರಾಜ್ಯ ಸರ್ಕಾರ ಜನರಿಗಾಗಿ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳನ್ನು ನೂರಕ್ಕೆ ನೂರು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಶ್ರಮವಹಿಸಿ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಸೂಚನೆ ನೀಡಿದರು.
ಮೈಸೂರಿನ ಜಿ.ಪಂ ಸಭಾಂಗಣದಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಯಾವ ರೀತಿ ಅನುಷ್ಠಾನವಾಗುತ್ತಿವೆ ಎಂಬ ವಿಚಾರ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಗೃಹಲಕ್ಷ್ಮಿ, ಗೃಹ ಜ್ಯೋತಿ, ಶಕ್ತಿ, ಯುವ ನಿಧಿ ಹಾಗೂ ಅನ್ನ ಭಾಗ್ಯ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಲಹೆ ನೀಡಿದರು. ಯೋಜನೆಗಳ ಅನುಷ್ಠಾನದಲ್ಲಿ ತಮಗೆ ಕೇಳಿ ಬಂದಿರುವ ಅನೇಕ ದೂರುಗಳನ್ನು ತಿಳಿಸಿ ಕೂಡಲೇ ಸಮಸ್ಯೆಯನ ಇತ್ಯರ್ಥ ಪಡಿಸುವಂತೆ ಸೂಚಿಸಿದರು.
ಸಭೆಯಲ್ಲಿ ಜಿ.ಪಂ ಸಿಇಓ ಗಾಯಿತ್ರಿ, ಸಮಿತಿಯ ಜಿಲ್ಲಾಧ್ಯಕ್ಷ ಅರುಣ್ ಕುಮಾರ್, ಉಪಾಧ್ಯಕ್ಷ ಹುಣಸೂರು ಬಸವಣ್ಣ, ಸದಸ್ಯರಾದ ಉತ್ತನಹಳ್ಳಿ ಶಿವಣ್ಣ ಸೇರಿ ಹಲವರು ಭಾಗಿಯಾಗಿದ್ದರು.
PublicNext
18/01/2025 11:40 am