ಬೆಂಗಳೂರು: ಪಿಓಪಿ ಕೆಲಸ ಮಾಡುತ್ತಿದ್ದಾಗ ಕಾರ್ಮಿಕನೋರ್ವ ಆಯತಪ್ಪಿ ನಿರ್ಮಾಣ ಹಂತದ ಮನೆ ಮೇಲಿಂದ ಬಿದ್ದು ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಹೊನ್ನಸಂದ್ರ ಗ್ರಾಮದಲ್ಲಿ ನಡೆದಿದೆ.
ರಾಯಚೂರು ಮೂಲದ ರಾಜ್ ಮಹಮ್ಮದ್ (32) ಮೃತ ದುರ್ದೈವಿ. ಬಸವರಾಜು ಎಂಬುವರಿಗೆ ಸೇರಿದ ನಿರ್ಮಾಣ ಹಂತದ ಮನೆಯಲ್ಲಿ ಪಿಓಪಿ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ತಲೆ ಸಂಪೂರ್ಣ ನಜ್ಜುಗುಜ್ಜಾಗಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾನೆ. ಮೃತ ರಾಜ್ ಮೊಹಮ್ಮದ್ ಕಳೆದ 10 ವರ್ಷಗಳಿಂದ ನೆಲಮಂಗಲದಲ್ಲಿ ವಾಸವಿದ್ದ ಎನ್ನಲಾಗಿದೆ. ಈ ಸಂಬಂಧ ಸ್ಥಳಕ್ಕೆ ಭೇಟಿ ನೀಡಿದ ಮಾದನಾಯಕನಹಳ್ಳಿ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸಾರ್ವಜನಿಕ ಅಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
PublicNext
18/01/2025 12:17 pm