ಬಿಗ್ ಬಾಸ್ ಮನೆಯಲ್ಲಿ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಹನುಮಂತ ಉತ್ತಮವಾಗಿ ಆಟ ಆಡುತ್ತಾ ಜನರ ಮನಗೆದ್ದಿದ್ದಾರೆ. ಫಿನಾಲೆ ವಾರಕ್ಕೆ ಮೊದಲ ಸ್ಪರ್ಧಿಯಾಗಿ ಈಗಾಗಲೇ ಎಂಟ್ರಿಯಾಗಿದ್ದಾರೆ. ಗೆಳೆಯ ಧನರಾಜ್ ಬಳಿ ಆಟದ ಬಗ್ಗೆ ಹನುಮಂತ ಚರ್ಚಿಸುತ್ತಾ, ಇಷ್ಟು ದಿನ ಬಿಗ್ ಬಾಸ್ ಮನೆಯಲ್ಲಿ ತಾವು ಆಟ ಆಡಿರುವುದರ ಬಗ್ಗೆ ತಮಗೆ ನೆಮ್ಮದಿ ಇದೆ ಎಂದು ಹನುಮಂತು ಹೇಳಿದ್ದಾರೆ.
ಜೊತೆಗೆ ಮುಂದಿನ ಪ್ಲ್ಯಾನ್ ಬಗ್ಗೆಯೂ ಮಾತನಾಡಿದ್ದಾರೆ. ಇಷ್ಟು ದಿನ ಚೆನ್ನಾಗಿ ಆಟ ಆಡಿದ್ದೇನೆ. ಒಂದು ವೇಳೆ ಔಟ್ ಆದರೆ ಖುಷಿಯಿಂದ ಹೊರಗೆ ಹೋಗುತ್ತೇನೆ. ಗೆದ್ದರೆ ನಮ್ಮ ಅತ್ತೆ ಮನೆಯ ಮುಂದೆ ಹೋಗಿ ನಿಲ್ಲುತ್ತೇನೆ. ಹುಡುಗಿ ಯಾಕೆ ಕೊಡಲ್ಲ ಅಂತ ಕೇಳುತ್ತೇನೆ ಎಂದು ಹನುಮಂತ ಮದುವೆ ಪ್ಲ್ಯಾನ್ ತಿಳಿಸಿದ್ದಾರೆ. ಬಿಗ್ ಬಾಸ್ ಶೋ ಮುಗಿದ ಮೇಲೆ ಮದುವೆ ಪ್ಲ್ಯಾನ್ ಬಗ್ಗೆ ಹನುಮಂತ ಹೇಳಿಕೊಂಡಿದ್ದಾರೆ. ಬಿಗ್ ಬಾಸ್ ಟ್ರೋಫಿ ಗೆದ್ದರೆ ಅತ್ತೆ ಮನೆಗೆ ಹೋಗಿ ಮದುವೆಗೆ ಹೆಣ್ಣು ಕೇಳ್ತೀನಿ ಎಂದು ಮಾತನಾಡಿದ್ದಾರೆ.
PublicNext
18/01/2025 03:07 pm